ಸತತ ಐದನೇ ತಿಂಗಳು ಏರ್ ಇಂಡಿಯಾ ಸಿಬ್ಬಂದಿ ಸಂಬಳದಲ್ಲಿ ವಿಳಂಬ
ಸತತ ಐದನೇ ತಿಂಗಳು ಕೂಡಾ ಏರ್ ಇಂಡಿಯಾ ಸಂಸ್ಥೆಯ ಸಿಬ್ಬಂದಿಗೆ ಸಂಬಳ ನೀಡುವಲ್ಲಿ ವಿಳಂಬವಾಗಿದೆ.

ನವದೆಹಲಿ : ಸತತ ಐದನೇ ತಿಂಗಳು ಏರ್ ಇಂಡಿಯಾ ನೌಕರರ ಸಂಬಳ ನೀಡುವಲ್ಲಿ ವಿಳಂಬವಾಗಿದೆ. ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಜುಲೈ ತಿಂಗಳಿನ ಸಂಬಳವನ್ನು ಇನ್ನೂ ಪಡೆದುಕೊಂಡಿಲ್ಲ.
ಸಂಬಳ ವಿಳಂಬದಿಂದ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಭಾರತೀಯ ವಾಣಿಜ್ಯ ಪೈಲಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ದೀಪಂಕರ್ ಗುಪ್ತಾ ಏರ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಸತತ ಐದನೇ ತಿಂಗಳು ಕೂಡಾ ಸಂಬಳದಲ್ಲಿ ವಿಳಂಬವಾಗಿದೆ. ನಿಮ್ಮಿಂದ ಸ್ಪಷ್ಟೀಕರಣ ಮತ್ತು ಭರವಸೆ ನೀಡಿದ ನಂತರವೂ ನೌಕರರಿಗೆ ನಿಗದಿತ ಅವಧಿಯಲ್ಲಿ ಸಂಬಳ ಹಾಗೂ ಭತ್ಯೆ ನೀಡುವಲ್ಲಿ ಆಡಳಿತ ಸಂಸ್ಥೆ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.
ಸಂಬಳ ವಿಳಂಬದಿಂದಾಗಿ ನೌಕರರು ಹಣಕಾಸು ಸಂಸ್ಥೆಗಳಿಂದ ಹಣ ಸಾಲ ಪಡೆದು ತೊಂದರೆ ಎದುರಿಸುವಂತಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


