ಆರ್ ಬಿಐ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ: ನೀತಿ ಆಯೋಗ
ಭಾರತೀಯ ರಿಸರ್ವ್ ಬ್ಯಾಂಕ್ ನ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ಯಾವುದೇ ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ ಎಂದು ಮಂಗಳವಾರ ನೀತಿ ಆಯೋಗ ಹೇಳಿದೆ.

Published On :
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ಯಾವುದೇ ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ ಎಂದು ಮಂಗಳವಾರ ನೀತಿ ಆಯೋಗ ಹೇಳಿದೆ.
ಆರ್ ಬಿಐ ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜಿನಾಮೆ ನೀಡಿದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು, ಕೇಂದ್ರೀಯ ಬ್ಯಾಂಕ್ ನ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಸಂಸ್ಥೆಯು ಯಾವುದೇ ವ್ಯಕ್ತಿಯ ಮೇಲೆ ಆಧಾರಿತವಾಗಿರದೇ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಶಕ್ತವಾಗಿದೆ. ಮಾರುಕಟ್ಟೆ ಮತ್ತು ಆರ್ಥಿಕತೆ ವಿಚಾರಕ್ಕೆ ಸಂಬಂಧಿಸಿದಂತೆ ಎಂತಹುದೇ ನಿರ್ಣಯಕೈಗೊಳ್ಳಲಿದೆ ಎಂದು ಹೇಳಿದರು.
ಇದೇ ವೇಳೆ ಮಾಜಿ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರ ಕುರಿತು ಮಾತನಾಡಿದ ಕುಮಾರ್ ಅವರು, ಆರ್ ಬಿಐ ಅಧ್ಯಕ್ಷರಾಗಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ. ಕಳೆದ 2 ವರ್ಷಗಳಲ್ಲಿ ಆರ್ ಬಿಐ ಸಂಸ್ಥೆಗಾಗಿ ದುಡಿದಿದ್ದಾರೆ. ಇನ್ನು ಅವರ ದಿಢೀರ್ ರಾಜಿನಾಮೆಯಿಂದಾಗಿ ಸಂಸ್ಥೆಯ ಕಾರ್ಯಕಲಾಪಕ್ಕೆ ದಕ್ಕೆಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿರುವ ಅವರು, ಮುಂದಿನ ಗವರ್ನರ್ ನೇಮಕ ಸಂಬಂಧ ಕೇಂದ್ರ ಸರ್ಕಾರ ಕೂಡ ಸೂಕ್ತ ಕ್ರಮ ಕೈಗೊಳ್ಳಲಿದೆ. ಯಾವುದೇ ಕಾರಣಕ್ಕೂ ಆರ್ ಬಿಐ ಕಾರ್ಯ ಕಲಾಪದಲ್ಲಿ ವ್ಯತ್ಯಯವಾಗದು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


