ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಗ್ರಾಹಕರ ವಿತ್ ಡ್ರಾ ಮಿತಿ ಹೆಚ್ಚಿಸಿದ ಆರ್ ಬಿಐ
ಮುಂಬೈನ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರ ವಿತ್ ಡ್ರಾ ಮಾಡುವ ಹಣದ ಮಿತಿಯನ್ನು ರಿಸರ್ವ್....

Published On :
ಮುಂಬೈ: ಮುಂಬೈನ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರ ವಿತ್ ಡ್ರಾ ಮಾಡುವ ಹಣದ ಮಿತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 5 ಸಾವಿರ ರುಪಾಯಿಗೆ ಹೆಚ್ಚಿಸಿದೆ.
ಸಹಕಾರಿ ಬ್ಯಾಂಕ್ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ ನಲ್ಲಿ ಆರ್ ಬಿಐ ವಿತ್ ಡ್ರಾ ಮಿತಿಯನ್ನು 1 ಸಾವಿರ ರುಪಾಯಿಗೆ ಮಿತಿಗೊಳಿಸಿತ್ತು.
ಈಗ ಬ್ಯಾಂಕ್ ಹಣಕಾಸಿನ ಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಎಸ್ ಬಿ ಅಕೌಂಟ್ ಅಥವಾ ಚಾಲ್ತಿ ಖಾತೆ ಹೊಂದಿರುವವರ ವಿತ್ ಡ್ರಾ ಮಿತಿಯನ್ನು 5 ಸಾವಿರ ರುಪಾಯಿಗೆ ಹೆಚ್ಚಿಸಲಾಗಿದೆ ಎಂದು ಆರ್ ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಆರ್ ಬಿಐ ಅನುಮತಿ ಇಲ್ಲದೆಯೇ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಯಾವುದೇ ಸಾಲ ನೀಡುವುದು, ಮುಂಗಡ ಹಣ ನೀಡುವುದು ಅಥವಾ ಹೂಡಿಕೆ ಮಾಡುವುದಕ್ಕೆ ಅವಕಾಶ ಇಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


