ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ.5.91 ಇಳಿಕೆ, ಸಬ್ಸಿಡಿ ರಹಿತ ರೂ.120.50 ಇಳಿಕೆ!
ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮುಂದಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.

Published On :
ನವದೆಹಲಿ: ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮುಂದಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.
ಕೇಂದ್ರ ಸರ್ಕಾರ ಎಲ್‌ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಹೌದು ಸಬ್ಸಿಡಿ ಸಹಿತ 14 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ 5.91 ರು.ಗಳ ಕಡಿತ ಮಾಡಿದ್ದು ಇದು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಇದರೊಂದಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ 494.99 ರುಪಾಯಿಗೆ ಸಿಗಲಿದೆ. ಇನ್ನು ಸಬ್ಸಿಡಿ ರಹಿತ ಎಲ್‌ಪಿಜಿ ದರ 120.50 ರುಪಾಯಿ ಕಡಿಮೆ ಮಾಡಲಾಗಿದ್ದು ಸದ್ಯದ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ 689 ರುಪಾಯಿ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


