ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ: ಆಭರಣ ಕ್ಷೇತ್ರದ ಷೇರುಗಳ ಮೌಲ್ಯ ಕುಸಿತ
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ವಂಚನೆ ಪ್ರಕರಣ ಭಾರತೀಯ ಷೇರುಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಪ್ರಮುಖವಾಗಿ ಜ್ಯುವೆಲರಿ ಕ್ಷೇತ್ರದ ಷೇರುಗಳ ಮೌಲ್ಯ ಕುಸಿತ ಕಂಡಿದೆ.

Published On :
ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ವಂಚನೆ ಪ್ರಕರಣ ಭಾರತೀಯ ಷೇರುಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಪ್ರಮುಖವಾಗಿ ಜ್ಯುವೆಲರಿ ಕ್ಷೇತ್ರದ ಷೇರುಗಳ ಮೌಲ್ಯ ಕುಸಿತ ಕಂಡಿದೆ.
ಭಾರತೀಯ ಷೇರುಮಾರುಕಟ್ಟೆ ಇಂದಿನ ವಹಿವಾಟಿನಲ್ಲಿ 240 ಅಂಕಗಳಷ್ಟು ಏರಿಕೆ ಕಂಡು 34,385 ಅಂಕಗಳಿಗೆ ಏರಿಕೆಯಾಗಿದ್ದು, ನಿಫ್ಟಿ ಕೂಡ 73 ಅಂಕಗಳ ಏರಿಕೆಯೊಂದಿಗೆ 10,570.20 ಅಂಕಗಳಿಗೆ ಏರಿಕೆಯಾಗಿದೆ. ಇನ್ನು ಇಂದಿನ ವಹಿವಾಟಿನಲ್ಲಿ ಆಭರಣ ಕ್ಷೇತ್ರದ ಷೇರುಗಳ ಮೌಲಯದಲ್ಲಿ ಬರೊಬ್ಬರಿ ಶೇ.19ರಷ್ಟು ಕುಸಿತ ಕಂಡುಬಂದಿದೆ. ಪ್ರಮುಖವಾಗಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ವಂಚನೆ ಪ್ರಕರಣ ಬೆಳಕಿಗೆ ಬಂದ ಬಳಿಕ ಕೇಂದ್ರ ಆದಾಯ ತೆರಿಗೆ ಇಲಾಖೆ ಆಭರಣ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳ ಮೇಲೆ ನಿಗಾವಹಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ಪ್ರಮುಖವಾಗಿ ಇಂದಿನ ವಹಿವಾಟಿನಲ್ಲಿ ಖ್ಯಾತ ಗೀತಾಂಜಲಿ ಜ್ಯುವೆಲರ್ಸ್ ಸಂಸ್ಥೆಗೆ ಭಾರಿ ನಷ್ಟವಾಗಿದ್ದು, ಗೀತಾಂಜಲಿ, ಗಿನ್ನಿ, ನಕ್ಷತ್ರ ಮತ್ತು ನಿರಾವ್ ಮೊದಿ ಆಭರಣ ಸಂಸ್ಥೆಗಳ ಮೇಲೆ ತೆರಿಗೆ ಇಲಾಖೆ ನಿಗಾ ವಹಿಸಿದೆ ಎನ್ನಲಾಗಿದೆ. ನಿನ್ನೆಯಷ್ಟೇ ಪಂಜಾಬ್ ನ್ಯಾಷನಲ್ ಬ್ಯಾಂಕ್ ಆಡಳಿತಾಧಿಕಾರಿಗಳು ತನ್ನ ಖಾಖೆಯಲ್ಲಿ 11, 346 ಕೋಟಿ ರೂ. ಅನುಮಾನಾಸ್ಪದ ವ್ಯವಹಾರ ನಡೆದಿರುವುದನ್ನು ಪತ್ತೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈSensexಸೆನ್ಸೆಕ್ಸ್ಪಂಜಾಬ್ ನ್ಯಾಷನಲ್ ಬ್ಯಾಂಕ್ಭಾರತೀಯ ಷೇರುಮಾರುಕಟ್ಟೆIndian stock marketPunjab national bankPNB Fraud Case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


