ವಿಮಾನಯಾನದ ವೇಳೆ ವೈಫೈ ಸೌಲಭ್ಯ: ಪ್ರಯಾಣ ದರದ ಶೇ.30 ರಷ್ಟು ಶುಲ್ಕ ವಿಧಿಸುವ ಸಾಧ್ಯತೆ
ವಿಮಾನ ಯಾನದಲ್ಲಿಯೂ ಇನ್ನು ಕೆಲವೇ ದಿನಗಳಲ್ಲಿ ಇಂಟರ್ ನೆಟ್ ಸೌಲಭ್ಯ ಲಭ್ಯವಾಗಲಿದ್ದು, ಇನ್-ಫ್ಲೈಟ್ ವೈಫೈ ಸೌಲಭ್ಯಕ್ಕೆ ಪ್ರಯಾಣದ ದರದ ಶೇ.20-30 ರಷ್ಟು ಶುಲ್ಕ ವಿಧಿಸುವ ಸಾಧ್ಯತೆ ಇದೆ..

Published On :
ಚೆನ್ನೈ: ವಿಮಾನ ಯಾನದಲ್ಲಿಯೂ ಇನ್ನು ಕೆಲವೇ ದಿನಗಳಲ್ಲಿ ಇಂಟರ್ ನೆಟ್ ಸೌಲಭ್ಯ ಲಭ್ಯವಾಗಲಿದ್ದು, ಇನ್-ಫ್ಲೈಟ್ ವೈಫೈ ಸೌಲಭ್ಯಕ್ಕೆ ಪ್ರಯಾಣದ ದರದ ಶೇ.20-30 ರಷ್ಟು ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ವಿಮಾನಯಾನದಲ್ಲೂ ಮೊಬೈಲ್ ಕರೆ ಹಾಗೂ ಇಂಟರ್ ನೆಟ್ ಸೌಲಭ್ಯಗಳನ್ನು ಒದಗಿಸಬೇಕೆಂದು ಇತ್ತೀಚೆಗಷ್ಟೇ ಟ್ರಾಯ್ ಶಿಫಾರಸ್ಸು ಮಾಡಿತ್ತು. ದೇಶಿಯ ಹಾಗೂ ಅಂತಾರಾಷ್ಟ್ರೀಯ ವಿಮಾನಯಾನದ ವೇಳೆ ವೈಫೈ ಸೌಲಭ್ಯ ಒದಗಿಸುವುದರಿಂದ ಅಂತಾರಾಷ್ಟ್ರೀಯ ದರ್ಜೆಯ ಸೌಲಭ್ಯ ನೀಡಿದಂತಾಗುತ್ತದೆ.
ವಿಮಾಯಾನದಲ್ಲಿ ಇಂಟರ್ ನೆಟ್ ಸೌಲಭ್ಯ ಒದಗಿಸುವುದಕ್ಕೆ ಅರ್ಧ ಗಂಟೆಯಿಂದ ಒಂದು ಗಂಟೆಯವರೆಗೆ 500, 1,000 ರೂಪಾಯಿ ಶುಲ್ಕ ವಿಧಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


