ವಾಣಿಜ್ಯ

ಷೇರು ಮಾರುಕಟ್ಟೆಯಲ್ಲಿ ಮತ್ತೆ ಗೂಳಿ ಆರ್ಭಟ; ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ ಅಂಕಗಳ ಆರಂಭ

ಕಳೆದ ವಾರ ದಾಖಲೆ ಅಂಕಗಳ ಏರಿಕೆಯೊಂದಿಹೆ ಸಾರ್ವಕಾಲಿಕ ದಾಖಲೆ ಬರೆದಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.

ಷೇರು ಮಾರುಕಟ್ಟೆಯಲ್ಲಿ ಮತ್ತೆ ಗೂಳಿ ಆರ್ಭಟ; ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ ಅಂಕಗಳ ಆರಂಭ
ಸಂಗ್ರಹ ಚಿತ್ರ
Published On :
ಮುಂಬೈ: ಕಳೆದ ವಾರ ದಾಖಲೆ ಅಂಕಗಳ ಏರಿಕೆಯೊಂದಿಹೆ ಸಾರ್ವಕಾಲಿಕ ದಾಖಲೆ ಬರೆದಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.
ಷೇರುಮಾರುಕಟ್ಟೆಯಲ್ಲಿ ಗೂಳಿ ಆರ್ಭಟ ಮುಂದುವರೆದಿದ್ದು, ಸೆನ್ಸೆಕ್ಸ್ ದಾಖಲೆಯ 37,491 ಅಂಕಗಳೊಂದಿಗೆ ವಹಿವಾಟು ಆರಂಭಿಸಿದೆ. ಭಾರತೀಯ ಷೇರುಮಾರುಕಟ್ಟೆ ಇತಿಹಾಸದಲ್ಲೇ ಇದು ಸಾರ್ವಕಾಲಿಕ ಗರಿಷ್ಠ ಅಂಕಗಳ ವಹಿವಾಟು ಆರಂವಾಗಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. 
ಅಂತೆಯೇ ನಿಫ್ಟಿ ಕೂಡ 11, 300 ಅಂಕಗಳ ಗಡಿ ದಾಟಿದ್ದು, ಇಂದು 24 ಅಂಕಗಳ ಏರಿಕೆಯೊಂದಿಗೆ ನಿಫ್ಟಿ 11, 300 ಅಂಕಗಳಲ್ಲಿ ವಹಿವಾಟು ನಡೆಸುತ್ತಿದೆ. 
ಇನ್ನು ಶುಕ್ರವಾರ ವಾರದ ವಹಿವಾಟು ಅಂತ್ಯಗೊಳಿಸುವ ವೇಳೆ ಭಾರತೀಯ ಷೇರುಮಾರುಕಟ್ಟೆ ದಾಖಲೆಯ ಅಂಕಗಳ ಏರಿಕೆಯೊಂದಿಗೆ ವಹಿವಾಟು ಅಂತ್ಯಗೊಳಿಸಿದ್ದು. ಸೆನ್ಸೆಕ್ಸ್ 37,336.85 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಳಿಸಿದ್ದರೆ, ನಿಫ್ಟಿ 11,278.35 ಅಂಕಗಳೊಂದಿಗೆ ತನ್ನ ವಾರದ ವಹಿವಾಟು ಅಂತ್ಯಗೊಳಿಸಿತ್ತು.
ಇದೀಗ ಅದೇ ಟ್ರೆಂಡ್ ಮುಂದುವರೆದಿದ್ದು, ವಾರದ ವಹಿವಾಟು ಆರಂಭದಲ್ಲೇ ಭಾರತೀಯ ಷೇರುಮಾರುಕಟ್ಟೆ ತನ್ನ ಅಂಕಗಳನ್ನು ಏರಿಕೆ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.