2017-18ರಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ನಷ್ಟ 87 ಸಾವಿರ ಕೋಟಿ ರು.!
2017–18ನೇ ಸಾಲಿನ ಹಣಕಾಸು ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು 87,300 ಕೋಟಿ ರುಪಾಯಿ ನಷ್ಟ ಅನುಭವಿಸಿದ್ದು...

Published On :
ನವದೆಹಲಿ: 2017–18ನೇ ಸಾಲಿನ ಹಣಕಾಸು ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು 87,300 ಕೋಟಿ ರುಪಾಯಿ ನಷ್ಟ ಅನುಭವಿಸಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮೊದಲ ಸ್ಥಾನದಲ್ಲಿದೆ.
ಸರ್ಕಾರಿ ಸ್ವಾಮ್ಯದ ಪ್ರಮುಖ 19 ಬ್ಯಾಂಕ್ ಗಳ ಒಟ್ಟು ನಷ್ಟವು 87,357 ಕೋಟಿ ರುಪಾಯಿಗೆ ತಲುಪಿದೆ ಎಂದು ಕೇಂದ್ರ ಹಣಕಾಸು ಇಲಾಖೆ ಪ್ರಕಟಿಸಿದೆ.
ಹಗರಣದಲ್ಲಿ ಸಿಲುಕಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಒಂದರ ನಷ್ಟದ ಮೊತ್ತವೇ 12,283 ಕೋಟಿ ಇದ್ದು, ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ಐಡಿಬಿಐ ಕಳೆದ ಹಣಕಾಸು ವರ್ಷದ 8,237 ಕೋಟಿ ರುಪಾಯಿ ನಷ್ಟ ಅನುಭವಿಸಿದೆ.
ಸರ್ಕಾರಿ ಸ್ವಾಮ್ಯದ ಒಟ್ಟು 21 ಬ್ಯಾಂಕ್ ಗಳ ಪೈಕಿ ವಿಜಯ ಬ್ಯಾಂಕ್ (727 ಕೋಟಿ ರು.) ಮತ್ತು ಇಂಡಿಯನ್ ಬ್ಯಾಂಕ್(1,259 ಕೋಟಿ ರು.) ಮಾತ್ರವೇ ಲಾಭದಲ್ಲಿವೆ.
ಸರ್ಕಾರಿ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಎಂದೇ ಖ್ಯಾತಿ ಪಡೆದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ಹಣಕಾಸು ವರ್ಷದ 6,547 ಕೋಟಿ ರು ನಷ್ಟ ಅನುಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Public sector banks2017-18Rs 87000 crore loss2017-18 fiscalಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು87 ಸಾವಿರ ಕೋಟಿ ರು. ನಷ್ಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


