ಅಕ್ಟೋಬರ್ ನಲ್ಲಿ ತಲುಪಿದ ನಿರುದ್ಯೋಗ ಪ್ರಮಾಣ 2 ವರ್ಷಗಳಲ್ಲೇ ಹೆಚ್ಚು!
ಅಕ್ಟೋಬರ್ ತಿಂಗಳಲ್ಲಿ ಭಾರತದ ನಿರುದ್ಯೋಗ ಪ್ರಮಾಣ 2 ವರ್ಷಗಳಲ್ಲೇ ಗರಿಷ್ಠ ಪ್ರಮಾಣಕ್ಕೆ ತಲುಪಿದ್ದು ಶೇ.6.9 ರಷ್ಟಾಗಿದೆ.

Published On :
ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ಭಾರತದ ನಿರುದ್ಯೋಗ ಪ್ರಮಾಣ 2 ವರ್ಷಗಳಲ್ಲೇ ಗರಿಷ್ಠ ಪ್ರಮಾಣಕ್ಕೆ ತಲುಪಿದ್ದು ಶೇ.6.9 ರಷ್ಟಾಗಿದೆ.
2017 ರ ಜುಲೈ ತಿಂಗಳಿನಿಂದ ನಿರುದ್ಯೋಗ ಮಟ್ಟ ಹೆಚ್ಚುತ್ತಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಸುಧಾರಣೆ ಕಂಡಿತ್ತು. ಆದರೆ ಸುಧಾರಣೆ ಕೇವಲ ಒಂದು ತಿಂಗಳಿಗಷ್ಟೇ ಸೀಮಿತವಾಗಿದ್ದು, ಅಕ್ಟೋಬರ್ ತಿಂಗಳಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ನೀಡಿರುವ ವರದಿಯ ಪ್ರಕಾರ ನಿರುದ್ಯೋಗ ಹೆಚ್ಚಿರುವುದು ಕಾರ್ಮಿಕ ಮಾರುಕಟ್ಟೆಗೆ ಉತ್ತಮ ಬೆಳವಣಿಗೆಯಲ್ಲ ಎಂದು ವಿಶ್ಲೇಷಿಸಲಾಗಿದೆ.
ಅಕ್ಟೋಬರ್ 2018 ರ ಪ್ರಕಾರ ಭಾರತದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ 42.4 ರಷ್ಟು ಜನರು ಮಾತ್ರ ಉದ್ಯೋಗದಲ್ಲಿರುವುದಕ್ಕೆ ಸಿದ್ಧರಿದ್ದಾರೆ. ನೋಟು ನಿಷೇಧದ ನಂತರ ಲೇಬರ್ ಪಾರ್ಟಿಸಿಪೇಷನ್ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಇನ್ನೂ ಚೇತರಿಕೆ ಕಂಡಿಲ್ಲ ಎಂದು ಸಿಎಂಐಇ ಹೇಳಿದೆ.
ಇದೇ ವೇಳೆ ಅಮಾನ್ಯೀಕರಣದ ನಂತರ ಸಂಸ್ಥೆಗಳು ನೇಮಕ ಮಾಡಿಕೊಳ್ಳುವುದನ್ನೂ ಕಡಿಮೆ ಮಾಡಿದ್ದು, ನಿರುದ್ಯೋಗಿಗಳು ಕೆಲಸ ಹುಡುಕುವುದನ್ನೇ ಬಿಟ್ಟುಬಿಟ್ಟಿದ್ದಾರೆ ಎಂದು ಸಿಎಂಐಇ ಸಮೀಕ್ಷೆ ಹೇಳಿದೆ. ಅಕ್ಟೋಬರ್ 2018 ರಲ್ಲಿ 29.5 ಮಿಲಿಯನ್ ಜನರಷ್ಟೇ ಸಕ್ರಿಯವಾಗಿ ಉದ್ಯೋಗ ಹುಡುಕುತ್ತಿದ್ದರು. ಈ ಸಂಖಿಯೆ 2017 ರಲ್ಲಿ 21.6 ಮಿಲಿಯನ್ ನಷ್ಟಿತ್ತು. 2017 ರಲ್ಲಿ ಉದ್ಯೋಗದಲ್ಲಿರುವವರ ಸಂಖ್ಯೆ 407 ಮಿಲಿಯನ್ ಆಗಿದ್ದರೆ, 2018 ರ ಅಕ್ಟೋಬರ್ ರಲ್ಲಿ ಈ ಸಂಖ್ಯೆ 397 ಮಿಲಿಯನ್ ಗೆ ಇಳಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


