ವಾಣಿಜ್ಯ

2ನೇ ತ್ರೈಮಾಸಿಕ ಅವಧಿಯಲ್ಲಿ ಶೇ. 8.2 ರಿಂದ ಶೇ.7.1 ಕ್ಕೆ ಕುಸಿದ ಜಿಡಿಪಿ

ದೇಶದ ಆರ್ಥಿಕ ಅಭಿವೃದ್ಧಿ ದರ(ಜಿಡಿಪಿ) ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ.7.1ಕ್ಕೆ ಕುಸಿದಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

2ನೇ ತ್ರೈಮಾಸಿಕ ಅವಧಿಯಲ್ಲಿ ಶೇ. 8.2 ರಿಂದ ಶೇ.7.1 ಕ್ಕೆ ಕುಸಿದ ಜಿಡಿಪಿ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ದೇಶದ ಆರ್ಥಿಕ ಅಭಿವೃದ್ಧಿ ದರ(ಜಿಡಿಪಿ) ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ.7.1ಕ್ಕೆ ಕುಸಿದಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇ.8.2 ರಷ್ಟಿದ್ದ ಜಿಡಿಪಿ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ,7.1 ಕ್ಕೆ ಕುಸಿದಿದೆ.
ಸಿಎಸ್ ಒ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಜೂನ್ ತ್ರೈಮಾಸಿಕ ಅವಧಿಯಲ್ಲಿ ಶೇ 8.2ರಷ್ಟು ಬೆಳವಣಿಗೆ ಕಂಡಿದ್ದ ಜಿಡಿಪಿ, ಈಗ ಜುಲೈ- ಸೆಪ್ಟೆಂಬರ್ ಅವಧಿಯಲ್ಲಿ 7.1 ರಷ್ಟು ಮಾತ್ರ ಬೆಳವಣಿಗೆ ಹೊಂದಿದೆ.
ಸ್ಥಿರ ಜಿಡಿಪಿಯು (2011-12)ಯು 2018-19ರ ಎರಡನೇ ತ್ರೈಮಾಸಿಕದಲ್ಲಿ ರು. 33.98 ಲಕ್ಷ ಕೋಟಿ ರು. ಆದರೆ ಕಳೆದ ವರ್ಷ ಇದೇ ಅವಧಿಯಲ್ಲಿ ಅದು 31.72 ಲಕ್ಷ ಕೋಟಿ ರುಪಾಯಿಗಳಾಗಿತ್ತು ಎಂದು ಸಿಎಸ್ ಒ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.