ಹೆಚ್ಚುವರಿ ಸಾಲ ನೀಡುವುದನ್ನು ತಡೆಯಲು ಆರ್ ಬಿಐ ವಿಫಲ: ಅರುಣ್ ಜೇಟ್ಲಿ ಟೀಕೆ
ಹೆಚ್ಚುವರಿ ಸಾಲವನ್ನು ನೀಡುವುದನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ ...

ನವದೆಹಲಿ: ಹೆಚ್ಚುವರಿ ಸಾಲವನ್ನು ನೀಡುವುದನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
2008ರಿಂದ 2014ರವರೆಗೆ ವಿವೇಚನೆಯಿಲ್ಲದೆ ಬ್ಯಾಂಕುಗಳು ಗ್ರಾಹಕರಿಗೆ ಸಾಲ ನೀಡುವಾಗ ರಿಸರ್ವ್ ಬ್ಯಾಂಕ್ ಅದಕ್ಕೆ ತಡೆಯೊಡ್ಡದೆ ಬೇರೆ ರೀತಿಯಲ್ಲಿ ನೋಡಿತು ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು.
ಕೇಂದ್ರ ಬ್ಯಾಂಕಾದ ಆರ್ ಬಿಐಯ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದು ಸಂಭಾವ್ಯ ದುರಂತ ಎಂದು ಕಳೆದ ಶುಕ್ರವಾರ ಬ್ಯಾಂಕಿನ ಉಪ ಗವರ್ನರ್ ವಿರಾಲ್ ಆಚಾರ್ಯ ಭಾಷಣವೊಂದರಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಇದರಿಂದ ಆರ್ ಬಿಐ ಮತ್ತು ಹಣಕಾಸು ಸಚಿವಾಲಯದ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿದೆ.
ತನ್ನ ನೀತಿಯನ್ನು ಸಡಿಲಗೊಳಿಸಿ ಅಧಿಕಾರವನ್ನು ಕುಂಠಿತಗೊಳಿಸುವ ಕೇಂದ್ರ ಸರ್ಕಾರದ ಒತ್ತಡಕ್ಕೆ ಆರ್ ಬಿಐಯ ವಿರೋಧವಿದೆ ಎಂಬುದನ್ನು ವಿರಾಲ್ ಆಚಾರ್ಯರ ಮಾತು ಸೂಚಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


