ರೂಪಾಯಿ ಸದೃಢವಾಗಿಯೇ ಇದೆ: ಸಮಸ್ಯೆ ಇರುವುದು ಡಾಲರ್ ನಲ್ಲಿ: ತೈಲ ಬೆಲೆ ಏರಿಕೆ ಕುರಿತು ಧರ್ಮೇಂದ್ರ ಪ್ರಧಾನ್
ತೈಲ ಬೆಲೆ ಮಿತಿ ಮೀರಿ ಏರಿಕೆಯಾಗುತ್ತಿರುವುದಕ್ಕೆ ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿಯ ಮೌಲ್ಯವೂ ಕಾರಣ ಎನ್ನಲಾಗುತ್ತಿದೆ. ಆದರೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ

Published On :
ತೈಲ ಬೆಲೆ ಮಿತಿ ಮೀರಿ ಏರಿಕೆಯಾಗುತ್ತಿರುವುದಕ್ಕೆ ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿಯ ಮೌಲ್ಯವೂ ಕಾರಣ ಎನ್ನಲಾಗುತ್ತಿದೆ. ಆದರೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ತದ್ವಿರುದ್ಧವಾದ ಹೇಳಿಕೆ ನೀಡಿದ್ದಾರೆ.
ರೂಪಾಯಿ ಹಿಂದೆಂದಿಗಿಂತಲೂ ಸದೃಢವಾಗಿದೆ. ಆದರೆ ಸಮಸ್ಯೆ ಉಂಟಾಗುತ್ತಿರುವುದು ಡಾಲರ್ ನಿಂದ ಎಂದು ಹೇಳುವ ಮೂಲಕ ಪೇಟ್ರೋಲಿಯಂ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಆ.15 ರಿಂದ ಈ ವರೆಗೆ 3 ರೂಪಾಯಿ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದರೆ ಡೀಸೆಲ್ ಬೆಲೆ 3.50 ರೂಪಾಯಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪೆಟ್ರೋಲಿಯಂ ಸಚಿವರು, ಸರ್ಕಾರ ಈ ವಿಷಯದಲ್ಲಿ ಯಾಕೆ ಹೆಚ್ಚಿನದ್ದನ್ನು ಮಾಡಲು ಸಾಧ್ಯವಿಲ್ಲ ಎಂಬುದನ್ನು ವಿವರಿಸಿದ್ದಾರೆ. ಮಾರುಕಟ್ಟೆಯಲ್ಲಿ ಅನಿವಾರ್ಯವಾಗಿ ಈ ಸ್ಥಿತಿ ನಿರ್ಮಾಣವಾಗಲಿ ಎರಡು ಪ್ರಮುಖ ಬಾಹ್ಯ ಕಾರಣಗಳಿವೆ. ಅಮೆರಿಕದ ಡಾಲರ್ ವಿಲಕ್ಷಣ, ತಡೆಯಲು ಸಾಧ್ಯವೇ ಇಲ್ಲದಂತಹ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿದೆ. ಇಂದು ಭಾರತದ ಕರೆನ್ಸಿ ಬೇರೆಲ್ಲಾ ಕರೆನ್ಸಿಗಳಿಗಿಂತಲೂ ಹಿಂದೆಂದಿಗಿಂತಲೂ ಸದೃಢವಾಗಿದೆ. ಆದರೆ ತೈಲವನ್ನು ಡಾಲರ್ ಮೂಲಕವೇ ಖರೀದಿಸುವ ಕಾರಣದಿಂದ ಈ ಎಲ್ಲಾ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಧರ್ಮೇಂದ್ರ ಪ್ರಧಾನ್ ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rupeedollarಡಾಲರ್Dharmendra Pradhanರೂಪಾಯಿ ಮೌಲ್ಯOil ministerfuel pricesತೈಲ ಬೆಲೆ ಏರಿಕೆಪೆಟ್ರೋಲಿಯಮ್ ಸಚಿವ ಧರ್ಮೇಂದ್ರ ಪ್ರಧಾನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


