ವಾಣಿಜ್ಯ

ಕೊನೆಗೂ ರುಪಾಯಿ ಮೌಲ್ಯ ಕುಸಿತ ತಡೆಯಲು ಮುಂದಾದ ಕೇಂದ್ರ, ಕ್ರಮಗಳ ಪಟ್ಟಿ ಬಿಡುಗಡೆ

ಕೊನೆಗೂ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹೆಚ್ಚುತ್ತಿರುವ ಚಾಲ್ತಿ ಖಾತೆ ಕೊರತೆ(ಸಿಎಡಿ: ಆಮದು-ರಫ್ತು ನಡುವಿನ...

ಕೊನೆಗೂ ರುಪಾಯಿ ಮೌಲ್ಯ ಕುಸಿತ ತಡೆಯಲು ಮುಂದಾದ ಕೇಂದ್ರ, ಕ್ರಮಗಳ ಪಟ್ಟಿ ಬಿಡುಗಡೆ
ಅರುಣ್ ಜೇಟ್ಲಿ
Published On :
ನವದೆಹಲಿ: ಕೊನೆಗೂ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹೆಚ್ಚುತ್ತಿರುವ ಚಾಲ್ತಿ ಖಾತೆ ಕೊರತೆ(ಸಿಎಡಿ: ಆಮದು-ರಫ್ತು ನಡುವಿನ ಅಂತರ)ಯನ್ನು ತಡೆಯಲು ಮುಂದಾಗಿದ್ದು, ಸಾಗರೋತ್ತರ ಸಾಲ ಹೆಚ್ಚಿಸಲು ನಿಯಮಗಳ ಸಡಿಲಿಕೆ ಮತ್ತು ಅನಗತ್ಯ ಆಮದುಗಳ ಮೇಲೆ ನಿರ್ಬಂಧ ವಿಧಿಸಲು ನಿರ್ಧರಿಸಿದೆ.
ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಸಭೆಯಲ್ಲಿ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಹಾಗೂ ಹಣಕಾಸು ಸಚಿವಾಲಯದ ಅಧಿಕಾರಿಗಳು ಪ್ರಧಾನಿಗೆ ಮಾಹಿತಿ ನೀಡಿದರು ಎಂದು ಜೇಟ್ಲಿ ತಿಳಿಸಿದ್ದಾರೆ.
ಸರ್ಕಾರ ರಫ್ತು ಉತ್ತೇಜನಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಮತ್ತು ಅಗತ್ಯವಲ್ಲದ ಆಮದುಗಳ ಮೇಲೆ ನಿರ್ಬಂಧ ವಿಧಿಸಲಾಗುವುದು ಎಂದು ಅವರು ಹೇಳಿದರು. ಆದರೆ ವಾಯ ವಸ್ತುಗಳ ಆಮದಿಗೆ ನಿರ್ಬಂಧ ವಿಧಿಸಲಾಗುವುದು ಎಂಬುದನ್ನು ಜೇಟ್ಲಿ ಬಹಿರಂಗಪಡಿಸಿಲ್ಲ.
ಯಾವ ವಸ್ತಗಳ ಆಮದಿಗೆ ನಿರ್ಬಂಧ ವಿಧಿಸಬೇಕು ಎಂಬುದನ್ನು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಜೇಟ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 12ರಂದು ಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ವಿನಿಮಯ ಮೌಲ್ಯ ಸಾರ್ವಕಾಲಿಕ ದಾಖಲೆಯ ಕುಸಿತ ಕಂಡಿದ್ದು, 72.91 ರುಪಾಯಿಗೆ ತಲುಪಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.