ಮತ್ತೆ ಗಗನಕ್ಕೇರಿದ ಇಂಧನ ಬೆಲೆ, 90ರ ಗಡಿಯತ್ತ ದಾಪುಗಾಲಿರಿಸುತ್ತಿರುವ ಪೆಟ್ರೋಲ್ ದರ!
ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಏರಿಕೆ ಕಂಡಿದ್ದು, ಪೆಟ್ರೋಲ್ ದರ 90ರ ಗಡಿಯತ್ತ ದಾಪುಗಾಲಿರಿಸಿದೆ.

Published On :
ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಏರಿಕೆ ಕಂಡಿದ್ದು, ಪೆಟ್ರೋಲ್ ದರ 90ರ ಗಡಿಯತ್ತ ದಾಪುಗಾಲಿರಿಸಿದೆ.
ಮಂಗಳವಾರ ಬೆಳಗ್ಗೆ ತೈಲೋತ್ಪನ್ನಗಳ ದರ ಪರಿಷ್ಕರಣೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 10 ಪೈಸೆ ಮತ್ತು ಡೀಸೆಲ್ ದರದಲ್ಲಿ 9 ಪೆೈಸೆಯಷ್ಟು ಏರಿಕೆಯಾಗಿದೆ.
ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 82.16ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 73.87ಕ್ಕೆ ಏರಿಕೆಯಾಗಿದೆ. ಇನ್ನು ಮುಂಬೈನಲ್ಲಿ ಪೆಟ್ರೋಲ್ ದರ 90ರ ಗಡಿಯತ್ತ ದಾಪುಗಾಲಿರಿಸಿದ್ದು, ಗ್ರಾಹಕರನ್ನು ಆತಂಕಕ್ಕೀಡುಮಾಡಿದೆ. ಪ್ರಸ್ತುತ ಮುಂಬೈನಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 89.54ಕ್ಕೆ ಏರಿಕೆಯಾಗಿದ್ದು, ಡೀಸೆಲ್ 78.42ಕ್ಕೆ ಏರಿಕೆಯಾಗಿದೆ.
ಕೋಲ್ಕತಾದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರ 83.91ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ದರ 75.53ಕ್ಕೆ ಏರಿಕೆಯಾಗಿದೆ. ಇನ್ನು ಚೆನ್ನೈನಲ್ಲಿ ಪೆಟ್ರೋಲ್ ದರ 85.31 ಮತ್ತು ಡೀಸೆಲ್ ದರ 78ರೂ ಗಳಿಗೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


