ನೆರವು ನಿರಾಕರಿಸಿದ ಬ್ಯಾಂಕ್ ಗಳು, ಜೆಟ್ ಏರ್ವೇಸ್ ನ ಎಲ್ಲಾ ವಿಮಾನಗಳ ಹಾರಟ ರದ್ದು
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆಗೆ ಬ್ಯಾಂಕ್ ಗಳು 400 ಕೋಟಿ ರುಪಾಯಿ ತುರ್ತು ನೆರವು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ...

Published On :
ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆಗೆ ಬ್ಯಾಂಕ್ ಗಳು 400 ಕೋಟಿ ರುಪಾಯಿ ತುರ್ತು ನೆರವು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದಲೇ ತಾತ್ಕಾಲಿಕವಾಗಿ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇದರ ಪರಿಣಾಮ 17 ಸಾವಿರ ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ.
ಜೆಟ್ ಏರ್ ವೇಸ್ ವಿಮಾನ ಸೇವೆಗಳಲ್ಲಿ ಅಡಚಣೆ ಉಂಟಾಗುವುದನ್ನು ತಪ್ಪಿಸಲು ಜೆಟ್ ಏರ್ ವೇಸ್ ಸಂಸ್ಥೆ ಎಸ್ ಬಿಐ ನೇತೃತ್ವದ 26 ಬ್ಯಾಂಕ್ ಗಳ ಒಕ್ಕೂಟಕ್ಕೆ 400 ಕೋಟಿ ರುಪಾಯಿ ತುರ್ತು ಹಣಕಾಸು ನೆರವು ನೀಡುವಂತೆ ಕೋರಿತ್ತು. ಆದರೆ ಬ್ಯಾಂಕ್ ಗಳು ನೆರವು ನಿರಾಕರಿಸಿದ್ದು, ಇಂದು ರಾತ್ರಿಯಿಂದಲೇ ಎಲ್ಲಾ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಭಾರತದ ಮತ್ತೊಂದು ಬೃಹತ್ ವಿಮಾನಯಾನ ಸಂಸ್ಥೆಯಾದ ಜೆಟ್ ಏರ್ ವೇಸ್ 8 ಸಾವಿರ ಕೋಟಿ ರುಪಾಯಿ ಸಾಲದಲ್ಲಿ ಸಿಲುಕಿದ್ದು, ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ನಿನ್ನೆಯಷ್ಟೇ ಜೆಟ್ ಏರ್ ವೇಸ್ ಸಂಸ್ಥಾಪಕ, ಮಾಜಿ ಮುಖ್ಯಸ್ಥ ನರೇಶ್ ಗೊಯಲ್ ಅವರು ನಷ್ಟದಲ್ಲಿರುವ ಸಂಸ್ಥೆಯ ಷೇರು ಖರೀದಿಸುವುದಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


