ವಾಣಿಜ್ಯ

ಏರ್ ಇಂಡಿಯಾ ಖಾಸಗೀಕರಣಕ್ಕೆ ಸರ್ಕಾರ ಬದ್ದ: ನಾಗರಿಕ ವಿಮಾನಯಾನ ಸಚಿವರಿಂದ ಮಹತ್ವದ ಘೋಷಣೆ

ಏರ್ ಇಂಡಿಯಾದ ಸಂಪೂರ್ಣ ಖಾಸಗೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.

ಏರ್ ಇಂಡಿಯಾ ಖಾಸಗೀಕರಣಕ್ಕೆ ಸರ್ಕಾರ ಬದ್ದ: ನಾಗರಿಕ ವಿಮಾನಯಾನ ಸಚಿವರಿಂದ ಮಹತ್ವದ ಘೋಷಣೆ
ಸಂಗ್ರಹ ಚಿತ್ರ
Published On :

ನವದೆಹಲಿ: ಏರ್ ಇಂಡಿಯಾದ ಸಂಪೂರ್ಣ ಖಾಸಗೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.

ನಾಗರಿಕ ವಿಮಾನಯಾನ ವರದಿಗಾರರ ಕಾರ್ಯಾಗಾರದಲ್ಲಿ ಅವರು ಮಾತನಾಡಿ, “ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಸಂಕಲ್ಪವನ್ನು ಸರ್ಕಾರ ಮಾಡಿದೆ ನಾವು ಲಭ್ಯವಿರುವ ಕಡಿಮೆ ಸಮಯದಲ್ಲಿ ಸಾಧ್ಯವಾದಷ್ಟು ಉತ್ತಮವಾದ ವ್ಯವಹಾರವನ್ನು ಪಡೆಯಬೇಕು. ಏರ್ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳಲು ಹಲವರು ತುಂಬಾ ಆಸಕ್ತಿ ಹೊಂದಿದ್ದಾರೆ' ಎಂದ ಅವರು "ಏರ್ ಇಂಡಿಯಾವನ್ನು ಯಾರು ಸ್ವಾಧೀನಪಡಿಸಿಕೊಳ್ಳುತ್ತಾರೋ ಅವರು ತುಂಬಾ ಅದೃಷ್ಟಶಾಲಿಯಾಗುತ್ತಾರೆ ಮತ್ತು ಬಲವಾದ ಖಾಸಗಿ ವಲಯದ ತತ್ವಗಳ ಪ್ರಕಾರ ಅದನ್ನು ಮುನ್ನಡೆಸಲು ಸಾಧ್ಯವಾಗುತ್ತದೆ" ಎಂದು ಹೇಳಿದರು.

ಈ ಹಿಂದೆ ಜುಲೈ 11 ರಂದು ಸಚಿವರು ಲೋಕಸಭೆಗೆ ರಾಷ್ಟ್ರೀಯ ವಾಹಕ ಏರ್ ಇಂಡಿಯಾದ ಆಯಕಟ್ಟಿನ ಹೂಡಿಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.