ಎಸ್ ಬಿಐ : ಹಣ ವಿತ್ ಡ್ರಾ ಮಾಡಲು ಹೊಸ ವರ್ಷದಿಂದ ಹೊಸ ನಿಯಮ ಜಾರಿ
ಭಾರತೀಯ ಸ್ಟೇಟ್ ಬ್ಯಾಂಕ್ ಗಳ (ಎಸ್ಬಿಐ)ಎಟಿಎಂಗಳಲ್ಲಿ ಹಣ ಹಿಂಪಡೆಯಲು ಹೊಸ ವರ್ಷದಿಂದ, ಹೊಸ ನಿಯಮ, ಒನ್ ಟೈಂ ಪಾಸ್ವರ್ಡ್, ಒಟಿಪಿ ಆಧಾರಿತ ಸೇವೆಯನ್ನಾಗಿ ಮಾರ್ಪಡಿಸುವುದಾಗಿ ಎಸ್ ಬಿಐ ಹೇಳಿದೆ

ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ ಗಳ (ಎಸ್ಬಿಐ)ಎಟಿಎಂಗಳಲ್ಲಿ ಹಣ ಹಿಂಪಡೆಯಲು ಹೊಸ ವರ್ಷದಿಂದ, ಹೊಸ ನಿಯಮ, ಒನ್ ಟೈಂ ಪಾಸ್ವರ್ಡ್, ಒಟಿಪಿ ಆಧಾರಿತ ಸೇವೆಯನ್ನಾಗಿ ಮಾರ್ಪಡಿಸುವುದಾಗಿ ಎಸ್ ಬಿಐ ಹೇಳಿದೆ
ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ 10,000 ರೂ.ಗಳಿಗಿಂತಲೂ ಹೆಚ್ಚು ಹಣ ವಿತ್ ಡ್ರಾ ಮಾಡುವವರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಎಟಿಎಂ ಕಾರ್ಡ್ ಗಳ ದುರುಪಯೋಗ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವಿಟರ್ ನಲ್ಲಿ ಬ್ಯಾಂಕ್ ಪ್ರಕಟಿಸಿದೆ.
ಎಟಿಎಂನಿಂದ ಹಣ ವಿತ್ ಡ್ರಾ ಮಾಡುವವರು ಎಟಿಎಂ ಯಂತ್ರದಲ್ಲಿ ತಮ್ಮ ಪಿನ್ ಸಂಖ್ಯೆ, 10,ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ನಮೂದಿಸಿದ ನಂತರ, ಗ್ರಾಹಕರ ಖಾತೆಯೊಂದಿಗೆ ಜೋಡಿಸಲ್ಪಟ್ಟಿರುವ ಅವರ ಮೊಬೈಲ್ ಸಂಖ್ಯೆಗೆ ನಾಲ್ಕು ಅಂಕಿಗಳ ಒಟಿಪಿ ರವಾನೆಯಾಗಲಿದೆ . ಆ ಸಂಖ್ಯೆಯನ್ನು ಎಟಿಎಂನಲ್ಲಿ ನಮೂದಿಸಿದ ನಂತರವಷ್ಟೇ ಗ್ರಾಹಕರು ಹಣ ಪಡೆಯಲು ಸಾಧ್ಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


