ತೈಲೋತ್ಪನ್ನಗಳ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಇಲ್ಲಿದೆ!
ತೈಲೋತ್ಪನ್ನಗಳ ದರ ಶುಕ್ರವಾರ ಮತ್ತೆ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ.

Published On :
ಮುಂಬೈ: ತೈಲೋತ್ಪನ್ನಗಳ ದರ ಶುಕ್ರವಾರ ಮತ್ತೆ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ.
ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಶುಕ್ರವಾರವೂ ತೈಲೋತ್ಪನ್ನಗಳ ದರ ಬದಲಾವಣೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ. ಆ ಮೂಲಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ ರೂ 73.27ಗೆ ಏರಿಕೆಯಾಗಿದ್ದು. ಡೀಸೆಲ್ ದರ 67.87 ರೂ.ಗೆ ಇಳಿಕೆಯಾಗಿದೆ.
ಇನ್ನು ರಾಷ್ಟ್ರ ರಾಜಧಾನಿ ದೆಹಲಿ ಲೀಟರ್ ಪೆಟ್ರೋಲ್ ದರ 70.94 ರೂ. ಮತ್ತು ಡೀಸೆಲ್ ದರ 65.71 ರೂಗೆ ಏರಿಕೆಯಾಗಿದೆ.
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪೆಟ್ರೋಲ್ ದರ 73.64 ರೂ. ಮತ್ತು ಡೀಸೆಲ್ ದರ 69.41 ರೂಗೆ ಏರಿಕೆಯಾಗಿದೆ. ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಪೆಟ್ರೋಲ್ ದರ 73.04 ರೂ. ಮತ್ತು ಡೀಸೆಲ್ ದರ 67.49 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ 76.57 ರೂ. ಮತ್ತು ಡೀಸೆಲ್ ದರ 68.81 ರೂ. ಇದೆ.
ಡಾಲರ್ ಎದುರು ರೂಪಾಯಿ ಮೌಲ್ಯ ಅಲ್ಪ ಪ್ರಮಾಣದಲ್ಲಿ ಕುಸಿದಿರುವುದೇ ತೈಲ ದರ ಏರಿಕೆಗೆ ಕಾರಣ ಎನ್ನಲಾಗಿದೆ. ಇನ್ನು ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ ಗೆ ರೂ. 3854ಕ್ಕೆ ತಲುಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Businessವಾಣಿಜ್ಯMumbaiಮುಂಬೈಪೆಟ್ರೋಲ್ ದರಅಂತಾರಾಷ್ಟ್ರೀಯ ತೈಲ ಮಾರುಕಟ್ಟೆPetrol RateInternational Oil Markets
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


