ಕೇಂದ್ರದಿಂದ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ಹೂಡಿಕೆ!
ಕೇಂದ್ರ ಸರ್ಕಾರ ಮರು ಬಂಡವಾಳ ಕ್ರೋಡೀಕರಣಕ್ಕಾಗಿ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ತೊಡಗಿಸಲು ಮುಂದಾಗಿದೆ.

Published On :
ನವದೆಹಲಿ: ಕೇಂದ್ರ ಸರ್ಕಾರ ಮರು ಬಂಡವಾಳ ಕ್ರೋಡೀಕರಣಕ್ಕಾಗಿ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ತೊಡಗಿಸಲು ಮುಂದಾಗಿದೆ.
48,239 ಕೋಟಿ ರೂ. ಪೈಕಿ, ಕಾರ್ಪೋರೇಷನ್ ಬ್ಯಾಂಕ್ 9,086 ಕೋಟಿ ರೂ. ಗರಿಷ್ಟ ಮೊತ್ತ ಪಡೆಯಲಿದೆ. ಮರು ಬಂಡವಾಳ ಕ್ರೋಡೀಕರಣಕ್ಕಾಗಿ ಅಲಹಾಬಾದ್ ಬ್ಯಾಂಕ್ 6,896 ಕೋಟಿ ರೂ. ಪಡೆಯಲಿದೆ ಎಂದು ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಇಂಡಿಯಾ 4,638 ಕೋಟಿ ರೂ., ಬ್ಯಾಂಕ್ ಆಫ್ ಮಹಾರಾಷ್ಟ್ರ 205 ಕೋಟಿ ರೂ., ಪಂಜಾಬ್ ನ್ಯಾಷನಲ್ ಬ್ಯಾಂಕ್ 5,908 ಕೋಟಿ ರೂ. ಯೂನಿಯನ್ ಬ್ಯಾಂಕ್ 4,112 ಕೋಟಿ ರೂ., ಆಂಧ್ರಾ ಬ್ಯಾಂಕ್ 3,256 ಕೋಟಿ ರೂ., ಸಿಂಡಿಕೇಟ್ ಬ್ಯಾಂಕ್ 1,603 ಕೋಟಿ ರೂ, ಪಡೆಯಲಿವೆ ಎಂದು ರಾಜೀವ್ ಕುಮಾರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


