ಸಿದ್ಧಾರ್ಥ್ ಸಾವಿನ ಬೆನ್ನಲ್ಲೇ ಮತ್ತೆ ಕಾಫಿ ಡೇ ಷೇರುಗಳ ಮೌಲ್ಯ ಕುಸಿತ
ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಅವರ ಸಂಸ್ಥೆಯ ಷೇರುಗಳ ಮೌಲ್ಯ ಸತತ 2ನೇ ದಿನವೂ ಕುಸಿತ ಕಂಡಿದೆ.

Published On :
ಮುಂಬೈ: ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಅವರ ಸಂಸ್ಥೆಯ ಷೇರುಗಳ ಮೌಲ್ಯ ಸತತ 2ನೇ ದಿನವೂ ಕುಸಿತ ಕಂಡಿದೆ.
ಮುಂಬೈ ಷೇರುಪೇಟೆಯ ಬುಧವಾರದ ವಹಿವಾಟಿನಲ್ಲಿಯೂ ಕಾಫಿ ಡೇ ಕಂಪನಿಯ ಷೇರುಗಳು ಶೇ.19.98ರಷ್ಟು ಕುಸಿದಿದ್ದು, ಷೇರಿನ ಒಟ್ಟು ಮೌಲ್ಯದಲ್ಲಿ 30.65 ರೂ. ಕುಸಿಯುವುದರೊಂದಿಗೆ ರು.122.75 ದರದಲ್ಲಿ ವಹಿವಾಟು ನಡೆಯುತ್ತಿದೆ. ಮಂಗಳವಾರ ಕೂಡ ಕಾಫಿ ಡೇ ಷೇರುಗಳ ಮೌಲ್ಯದಲ್ಲಿ ಶೇ.20ರಷ್ಟು ಕುಸಿತ ಕಂಡಿತ್ತು.
ಇನ್ನು ಇಂದಿನ ಷೇರು ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆಯ ಸೆನ್ಸೆಕ್ಸ್ 83.84 ಅಂಕಗಳ ಕುಸಿತ ಕಂಡಿದ್ದು, ಸೆನ್ಸೆಕ್ಸ್ 37,313.39 ಅಂಕಗಳೊಂದಿಗೆ ವಹಿವಾಟು ನಡೆಸುತ್ತಿದೆ. ಅಂತೆಯೇ ನಿಫ್ಚಿ ಕೂಡ 25.50 ಅಂಕಗಳ ಕುಸಿತದೊಂದಿಗೆ 11,057.75 ಅಂಕಗಳಲ್ಲಿ ವಹಿವಾಟು ನಡೆಸುತ್ತಿದೆ. ಭಾರತೀಯ ಉದ್ಯಮವಲಯದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಕಾಫಿ ಡೇ ಶೇರುಗಳ ಕುಸಿತವೂ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮಂಗಳೂರುCafé Coffee Dayಕೆಫೆ ಕಾಫಿ ಡೇDead Bodyಮೃತ ದೇಹIndian Share marketVG Siddharthaವಿ.ಜಿ ಸಿದ್ಧಾರ್ಥ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


