ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ಧಿ, ಎಟಿಎಂಗಳಲ್ಲಿ ಕಾರ್ಡ್ ರಹಿತ ನಗದು ವಿಥ್ ಡ್ರಾ ಸೌಲಭ್ಯ
ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ಯೊನೊ ( YONO) ಆಪ್ ಮೂಲಕ ದೇಶದಲ್ಲಿನ 16 ಸಾವಿರ 500 ಎಟಿಎಂಗಳಿಂದ ಕಾರ್ಡ್ ರಹಿತವಾಗಿ ಹಣ ಡ್ರಾ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

Published On :
ನವದೆಹಲಿ: ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿನ ಸುಮಾರು 16 ಸಾವಿರ 500 ಎಟಿಎಂಗಳಿಂದ ಯೊನೊ ಆಪ್ ಮೂಲಕ ಕಾರ್ಡ್ ರಹಿತ ಹಣ ಡ್ರಾ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.
'ಯೊನೊ ಕ್ಯಾಷ್ ಪಾಯಿಂಟ್ಸ್ ' ಎಂದು ಕರೆಯಲಾಗುವ ಈ ವ್ಯವಸ್ಥೆಯಿಂದಾಗಿ ಸ್ಕಿಮಿಂಗ್ ಮತ್ತು ಕ್ಲೋನಿಂಗ್ ಸಮಸ್ಯೆ ನಿವಾರಣೆಯಾಗಲಿದೆ. ಈ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಬ್ಯಾಂಕ್ ಹೇಳಿದೆ.
ಹಣ ಡ್ರಾ ಮಾಡಲು ಯೊನೊ ಆಪ್ ಬಳಸುವ ಕ್ರಮ
ಈ ಸೇವೆಯ ಮೂಲಕ ಹಣ ಪಡೆಯುವ ಪ್ರಕ್ರಿಯೆಯು ಎರಡು ಅಂಶದ ದೃಢೀಕರಣವನ್ನು ಒಳಗೊಂಡಿದ್ದು, ಗ್ರಾಹಕರು ಯೊನೊ ಆಪ್ ಇನ್ ಸ್ಟಾಲ್ ಮಾಡಿಕೊಳ್ಳಬೇಕಾಗುತ್ತದೆ. ನಂತರ ವ್ಯವಹಾರಕ್ಕಾಗಿ ಪಿನ್ ಸೆಟ್ಟಿಂಗ್ ಮಾಡಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


