ವಾಣಿಜ್ಯ

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಗಗನದತ್ತ ಮುಖ ಮಾಡಿದ ಇಂಧನ ದರಗಳು!

ನಿರೀಕ್ಷೆಯಂತೆಯೇ ಲೋಕಸಭಾ ಚುನಾವಣೆ ಬಳಿಕ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆ ಕಂಡಿವೆ.

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಗಗನದತ್ತ ಮುಖ ಮಾಡಿದ ಇಂಧನ ದರಗಳು!
ಸಂಗ್ರಹ ಚಿತ್ರ
Published On :
ನವದೆಹಲಿ: ನಿರೀಕ್ಷೆಯಂತೆಯೇ ಲೋಕಸಭಾ ಚುನಾವಣೆ ಬಳಿಕ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆ ಕಂಡಿವೆ. 
ಲೋಕಸಭಾ ಚುನಾವಣೆ ಮುಕ್ತಾಯದ ಬೆೃನ್ನಲ್ಲೇ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಕಳೆದ ಮೇ 20ರಿಂದಲೂ ಇಂಧನ ದರಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕಳೆದ 9 ದಿನಗಳ ಅವಧಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ 83 ಪೈಸೆ ಮತ್ತು  ಪ್ರತೀ ಲೀಟರ್ ಡೀಸೆಲ್ ದರದಲ್ಲಿ 73 ಪೈಸೆ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.
ಕಳೆದ ಏಪ್ರಿಲ್ ತಿಂಗಳಿನಿಂದಲೇ ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆಯಾಗಿತ್ತಾದರೂ, ಭಾರತದಲ್ಲಿ ಚುನಾವಣೆ ಇದ್ದಿದ್ದರಿಂದ ಇಂಧನ ಸಂಸ್ಥೆಗಳು ದರ ಏರಿಕೆ ಮಾಡಿರಲಿಲ್ಲ. ಹೀಗಾಗಿ ಲೋಕಸಭಾ ಚುನಾವಣೆ ಮತದಾನ ಮುಕ್ತಾಯದ ಬೆನ್ನಲ್ಲೇ ಪೆಟ್ರೋಲಿಯಂ ಸಂಸ್ಥೆಗಳು ಕ್ರಮೇಣ ದರ ಏರಿಕೆ ಮಾಡುತ್ತಿವೆ. ಮೇ14ರಿಂದಲೂ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ದರ ಏರಿಕೆಯಾಗುತ್ತಾ ಬಂದಿದೆ. ಮಂಗಳವಾರವೂ ಸಹ ಇಂಧನ ದರ ಏರಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ 11 ಪೈಸೆ ಮತ್ತು  ಪ್ರತೀ ಲೀಟರ್ ಡೀಸೆಲ್ ದರದಲ್ಲಿ 05 ಪೈಸೆ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.