ದೇಶದ ರೈತರು, ಸಣ್ಣ ಉದ್ಯಮಕ್ಕೆ ತೊಂದರೆ ಹಿನ್ನಲೆ ಮುಕ್ತ ವ್ಯಾಪಾರ ಒಪ್ಪಂದ ತಿರಸ್ಕರಿಸಿದ ಭಾರತ
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್ಸಿಇಪಿ) ಒಪ್ಪಂದದಿಂದ ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆಯಾಗಲಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಮತ್ತು ರೈತರು ಪ್ರತಿಭಟನೆ ನಡೆಸಿದ್ದವು. ಸದ್ಯ ಈ ಒಪ್ಪಂದವನ್ನು ಭಾರತ ತಿರಸ್ಕರಿಸಿದೆ.

ಬ್ಯಾಂಕಾಕ್: ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್ಸಿಇಪಿ) ಒಪ್ಪಂದದಿಂದ ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆಯಾಗಲಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಮತ್ತು ರೈತರು ಪ್ರತಿಭಟನೆ ನಡೆಸಿದ್ದವು. ಸದ್ಯ ಈ ಒಪ್ಪಂದವನ್ನು ಭಾರತ ತಿರಸ್ಕರಿಸಿದೆ.
ಸುಂಕ ರಹಿತ ವ್ಯಾಪರಕ್ಕೆ ಸದಸ್ಯ ರಾಷ್ಟ್ರಗಳಿಗೆ ಅವಕಾಶ ಕೊಡುವುದರಿಂದ ಇದು ನಮ್ಮ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತದೆ. ಹೀಗಾಗಿ ಕೆಲವು ಸರಕುಗಳ ಮೇಲೆ ಸುಂಕ ಜಾರಿಯಲ್ಲಿರಲು ಅವಕಾಶ ನೀಡಬೇಕು ಎಂದು ಭಾರತ ಪಟ್ಟು ಹಿಡಿದಿತ್ತು. ಆದರೆ ಇದಕ್ಕೆ ಉಳಿದ ರಾಷ್ಟ್ರಗಳು ಸಹಮತ ಸೂಚಿಸದೆ ಇದ್ದಿದ್ದರಿಂದ ಈ ಒಪ್ಪಂದವನ್ನು ತಿರಸ್ಕರಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯವು ತಿಳಿಸಿದೆ.
ವಿಯೆಟ್ನಾಂನಲ್ಲಿ 2020ರ ಫೆಬ್ರವರಿಯಲ್ಲಿ ನಡೆಯಲಿರುವ ಆರ್ಸಿಇಪಿ ಶೃಂಗಸಭೆಯಲ್ಲಿ ಭಾರತವನ್ನು ಹೊರತುಪಡಿಸಿ ಉಳಿದ 15 ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಲಿವೆ.
ಈ ಒಪ್ಪಂದಕ್ಕೆ ಸಹಿ ಹಾಕಿದರೆ ಚೀನಾದಿಂದ ಅತ್ಯಂತ ಕಡಿಮೆ ಬೆಲೆಯಲ್ಲಿ ಸರಕುಗಳು ಭಾರತಕ್ಕೆ ಆಮದಾಗುತ್ತದೆ. ಇದರಿಂದ ಭಾರತೀಯ ವಸ್ತುಗಳಿಗೆ ಬೇಡಿಕೆ ಕುಸಿದು, ಭಾರತದ ತಯಾರಿಕಾ ವಲಯಕ್ಕೆ ಧಕ್ಕೆಯಾಗುತ್ತದೆ. ಹಾಲಿನ ಉತ್ಪನ್ನಗಳೂ ಕಡಿಮೆ ಬೆಲೆಯಲ್ಲಿ ಆಮದಾಗುವುದರಿಂದ ಭಾರತದ ಹೈನುಗಾರಿಕೆಗೆ ಧಕ್ಕೆಯಾಗುವ ಸಾಧ್ಯತೆ ಇತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


