ನೋಟ್ ಬ್ಯಾನ್ ಗೆ ಮೂರು ವರ್ಷ, 2000 ರೂ. ನೋಟು ರದ್ದುಗೊಳಿಸಿ ಎಂದ ಮಾಜಿ ಹಣಕಾಸು ಕಾರ್ಯದರ್ಶಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಇಂದಿಗೆ ಮೂರು ವರ್ಷ. ಇದರ ಬೆನ್ನಲ್ಲೇ 2000 ರೂಪಾಯಿ ನೋಟುಗಳನ್ನು...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಇಂದಿಗೆ ಮೂರು ವರ್ಷ. ಇದರ ಬೆನ್ನಲ್ಲೇ 2000 ರೂಪಾಯಿ ನೋಟುಗಳನ್ನು ರದ್ದುಗೊಳಿಸುವುದು ಉತ್ತಮ ಎಂದು ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಅವರು ಹೇಳಿದ್ದಾರೆ.
2000 ರೂಪಾಯಿಯ ಬಹುತೇಕ ನೋಟುಗಳು ಈಗ ಚಲಾವಣೆಯಲ್ಲಿಲ್ಲ. 2000 ರು. ಮುಖಬೆಲೆಯ ನೋಟುಗಳನ್ನು ಭಾರೀ ಪ್ರಮಾಣದಲ್ಲಿ ಕಾಳಧನಿಕರು ಗುಪ್ತವಾಗಿ ಕೂಡಿಟ್ಟಿರುವ ಶಂಕೆ ಇದೆ. ಹೀಗಾಗಿ ಈ ನೋಟುಗಳ ಅಪನಗದೀಕರಣ ಆಗಲೂಬಹುದು ಎಂದು ಗರ್ಗ್ ಸುಳಿವು ನೀಡಿದ್ದಾರೆ.
‘2000 ರು. ಮುಖಬೆಲೆಯ ನೋಟುಗಳು ದೇಶದಲ್ಲಿ ಚಲಾವಣೆಯಲ್ಲಿರುವ ಒಟ್ಟಾರೆ ಕರೆನ್ಸಿ ನೋಟುಗಳ ಪೈಕಿ ಶೇ.33 ರಷ್ಟು ಪಾಲು ಹೊಂದಿವೆ. ಆದರೆ ಈ ಪೈಕಿ ಸಾಕಷ್ಟು ನೋಟುಗಳು ಈಗ ಚಲಾವಣೆಯಲ್ಲೇ ಇಲ್ಲ. ಇವುಗಳನ್ನು ಅಕ್ರಮವಾಗಿ ಕಾಳಧನಿಕರು ದಾಸ್ತಾನು ಮಾಡಿಟ್ಟಿರುವ ಶಂಕೆ ಇದೆ’ ಎಂದಿದ್ದಾರೆ.
1,000 ಹಾಗೂ 500 ರೂ. ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿ ನವೆಂಬರ್ 8ಕ್ಕೆ ಮೂರು ವರ್ಷಗಳು ಪೂರ್ಣಗೊಂಡಿದೆ. ನೋಟು ರದ್ದತಿ ಬಳಿಕ 2,000 ರೂ. ಮುಖಬೆಲೆಯ ನೋಟುಗಳು ಚಲಾವಣೆಗೆ ಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


