2019ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.6.1ಕ್ಕೆ ಕುಸಿಯಲಿದೆ: ಐಎಂಎಫ್
ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಮಂಗಳವಾರ ಭಾರತದ ಆರ್ಥಿಕ ಬೆಳವಣಿಗೆ ಪ್ರಮಾಣವನ್ನು ಮತ್ತೆ ಪರಿಸ್ಕರಿಸಿದ್ದು, 2019ರಲ್ಲಿ ಜಿಡಿಪಿ ಶೇ.6.1ಕ್ಕೆ ಕುಸಿಯಲಿದೆ ಎಂದು ಹೇಳಿದೆ.

ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಮಂಗಳವಾರ ಭಾರತದ ಆರ್ಥಿಕ ಬೆಳವಣಿಗೆ ಪ್ರಮಾಣವನ್ನು ಮತ್ತೆ ಪರಿಸ್ಕರಿಸಿದ್ದು, 2019ರಲ್ಲಿ ಜಿಡಿಪಿ ಶೇ.6.1ಕ್ಕೆ ಕುಸಿಯಲಿದೆ ಎಂದು ಹೇಳಿದೆ.
ಕಳೆದ ಏಪ್ರಿಲ್ ನಲ್ಲಿ ಭಾರತ 2019ರಲ್ಲಿ ಶೇ.7.3ರಷ್ಟು ಆರ್ಥಿಕ ಅಭಿವೃದ್ಧಿ ಸಾಧಿಸಲಿದೆ ಎಂದು ಹೇಳಿತ್ತು. ಈಗ ಮೂರು ತಿಂಗಳ ನಂತರ ಭಾರತದ ಆರ್ಥಿಕ ಬೆಳವಣಿಗೆ ಶೇ. 6.1ಕ್ಕೆ ಕುಸಿಯಲಿದೆ ಎಂದು ಹೇಳಿದೆ.
2018ರಲ್ಲಿ ಭಾರತ ಶೇ. 6.8ರಷ್ಟು ಆರ್ಥಿಕ ಅಭಿವೃದ್ಧಿ ಸಾಧಿಸಿತ್ತು. ಆದರ ಈ ವರ್ಷ ಶೇ. 6.1ರಷ್ಟು ಮಾತ್ರ ಅಭಿವೃದ್ಧಿ ಸಾಧಿಸಲಿದೆ ಎಂದು ವಿಶ್ವ ಹಣಕಾಸು ಸಂಸ್ಥೆ ಮುನ್ನೋಟ ತಿಳಿಸಿದೆ. ಅಲ್ಲದೆ ಭಾರತದ ಆರ್ಥಿಕ ಬೆಳವಣಿಗೆ 2020ರ ವೇಳೆಗೆ ಚೇತರಿಸಿಕೊಳ್ಳಲಿದ್ದು, ಶೇ.7.0ರಷ್ಟು ಏರಿಕೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.
ಕಳೆದ ಭಾನುವಾರ ಬಿಡುಗಡೆಯಾದ ವಿಶ್ವ ಬ್ಯಾಂಕ್‍ನ ದಕ್ಷಿಣ ಏಷ್ಯಾದ ಆರ್ಥಿಕ ಮುನ್ನೋಟದಲ್ಲಿ, ಭಾರತದ ಆರ್ಥಿಕ ಬೆಳವಣಿಗೆ ಶೇ. 6ಕ್ಕೆ ಕುಸಿಯಲಿದೆ ಎಂದು ಹೇಳಿತ್ತು. ಕಳೆದ ಹಣಕಾಸು ವರ್ಷದಲ್ಲಿ(2018-19) ಇದೇ ಅವಧಿಯಲ್ಲಿ ಭಾರತದ ಬೆಳವಣಿಗೆ ದರ ಶೇ.6.9ರಷ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


