ಮುಂದಿನ ವರ್ಷದ ಭಾರತದ ಆರ್ಥಿಕ ಬೆಳವಣಿಗೆ ಅಂದಾಜು ಬಹಿರಂಗಪಡಿಸಿದ ಐಎಂಎಫ್
ಭಾರತದ ಆರ್ಥಿಕತೆ 2020 ವೇಳೆಗೆ ಶೇ.7 ರಷ್ಟು ಬೆಳವಣಿಗೆ ಕಾಣಲಿದೆ ಎಂದು ಐಎಂಎಫ್ ಅಂದಾಜು ಪ್ರಕಟಿಸಿದೆ.

ಭಾರತದ ಆರ್ಥಿಕತೆ 2020 ವೇಳೆಗೆ ಶೇ.7 ರಷ್ಟು ಬೆಳವಣಿಗೆ ಕಾಣಲಿದೆ ಎಂದು ಐಎಂಎಫ್ ಅಂದಾಜು ಪ್ರಕಟಿಸಿದೆ.
ಆರ್ಥಿಕ ಉತ್ತೇಜನ ಹಾಗೂ ಕಾರ್ಪೊರೇಟ್ ಆದಾಯ ತೆರಿಗೆ ಕಡಿತ ಸೇರಿದಂತೆ ಹಲವು ಕ್ರಮಗಳ ಪರಿಣಾಮವಾಗಿ ಭಾರತದ ಆರ್ಥಿಕತೆ 2020 ವೇಳೆಗೆ ಶೇ.7 ರಷ್ಟು ಬೆಳವಣಿಗೆ ಸಾಧ್ಯವಾಗಲಿದೆ ಎಂದು ಐಎಂಎಫ್ ನ ಏಷ್ಯಾ ಪೆಸಿಫಿಕ್ ವಿಭಾಗದ ನಿರ್ದೇಶಕ ಜೊನಾಥನ್ ಒಸ್ಟ್ರಿ ಹೇಳಿದ್ದಾರೆ.
ಈ ವರ್ಷ ಶೇ.6.1 ರಷ್ಟು ಬೆಳವಣಿಗೆ ಇರುವ ಭಾರತದ ಆರ್ಥಿಕತೆ ಮುಂದಿನ ವರ್ಷದಲ್ಲಿ ಶೇ.7 ರಷ್ಟು ಬೆಳವಣಿಗೆಗೆ ತಲುಪಲಿದೆ. ಸದ್ಯದ ಭಾರತದ ಆರ್ಥಿಕ ಹಿಂಜರಿತದ ಬಗ್ಗೆ ನಮಗೂ ಅಚ್ಚರಿ ಉಂಟಾಗಿದೆ. ಆರ್ಥಿಕ ಹಿಂಜರಿತಕ್ಕೆ ಯಾವುದೇ ಕಾರಣಗಳೂ ಇರಲಿಲ್ಲ ಎಂದು ಜೊನಾಥನ್ ಒಸ್ಟ್ರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


