ಉದ್ಯಮ ಸ್ನೇಹಿ ದೇಶಗಳು: ವಿಶ್ವಬ್ಯಾಂಕ್ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತಕ್ಕೆ 63ನೇ ಸ್ಥಾನ
ವಿಶ್ವ ಬ್ಯಾಂಕ್ ಬಿಡುಗಡೆ ಮಾಡಿರುವ ಉದ್ಯಮ ಸ್ನೇಹಿ ದೇಶಗಳ ಪಟ್ಟಿಯಲ್ಲಿ ಭಾರತ 14 ಸ್ಥಾನಗಳ ಏರಿಕೆ ಕಂಡು 63ನೇ ಸ್ಥಾನದಲ್ಲಿದೆ.

ವಾಷಿಂಗ್ಟನ್: ವಿಶ್ವ ಬ್ಯಾಂಕ್ ಬಿಡುಗಡೆ ಮಾಡಿರುವ ಉದ್ಯಮ ಸ್ನೇಹಿ ದೇಶಗಳ ಪಟ್ಟಿಯಲ್ಲಿ ಭಾರತ 14 ಸ್ಥಾನಗಳ ಏರಿಕೆ ಕಂಡು 63ನೇ ಸ್ಥಾನದಲ್ಲಿದೆ.
ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆ ಮತ್ತು ಇತರ ಸುಧಾರಣಾ ಕ್ರಮಗಳು ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಸುಲಭವಾಗಿ ಉದ್ಯಮ ನಡೆಸಬಹುದಾದ ದೇಶಗಳ ಪೈಕಿ ಪ್ರಮುಖ 10 ದೇಶಗಳ ಪಟ್ಟಿಯಲ್ಲಿ ಕೂಡ ಸತತ ಮೂರನೇ ಬಾರಿಗೆ ಭಾರತ ಸ್ಥಾನ ಭದ್ರಪಡಿಸಿಕೊಂಡಿದೆ.
ಭಾರತ ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ವಿಶ್ವಬ್ಯಾಂಕ್, ಅಂತಾರಾಷ್ಟ್ರೀಯ ಹಣಕಾಸು ನಿಧಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೀಗೆ ಹಲವು ದೇಶಗಳು ಎಚ್ಚರಿಕೆ ನೀಡಿರುವ ಸಂದರ್ಭದಲ್ಲಿ ವಿಶ್ವಬ್ಯಾಂಕಿನ ಈ ರ್ಯಾಂಕಿಂಗ್ ಪಟ್ಟಿ ಹೊರಬಿದ್ದಿರುವುದು ಭಾರತದ ಅರ್ಥ ವ್ಯವಸ್ಥೆ ಮೇಲೆ ಆಶಾವಾದ ಇರಿಸಿಕೊಳ್ಳುವಂತೆ ಮಾಡಿದೆ.
2014ರಲ್ಲಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗ ವಿಶ್ವದ ಉದ್ಯಮಸ್ನೇಹಿ 190 ದೇಶಗಳ ಪೈಕಿ ಭಾರತ 142ನೇ ಸ್ಥಾನದಲ್ಲಿತ್ತು. ಹಲವು ಸುಧಾರಣಾ ಕ್ರಮಗಳಿಂದಾಗಿ ಕಳೆದ ವರ್ಷ ಭಾರತ 100ನೇ ಸ್ಥಾನಕ್ಕೇರಿತ್ತು. ಅದರ ಹಿಂದಿನ ವರ್ಷ ಅಂದರೆ 2017ರಲ್ಲಿ 130ನೇ ಸ್ಥಾನದಲ್ಲಿದ್ದು ಇರಾನ್ ಮತ್ತು ಉಗಾಂಡ ದೇಶಗಳಿಂದ ಹಿಂದೆ ಇತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


