ಸೆ. 26, 27ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ
10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ನಾಲ್ಕು ಬ್ಯಾಂಕ್ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.

ಕೋಲ್ಕತಾ: 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ನಾಲ್ಕು ಬ್ಯಾಂಕ್ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.
ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ(ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ(ಎಐಬಿಒಎ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್(ಐಎನ್‌ಬಿಒಸಿ) ಮತ್ತು ನ್ಯಾಷನಲ್ ಆರ್ಗನೈಸೇಶನ್ ಆಫ್ ಬ್ಯಾಂಕ್ ಅಧಿಕಾರಿಗಳು(ನೊಬೊ) ಜಂಟಿಯಾಗಿ ಸೆಪ್ಟೆಂಬರ್ 26 ಮತ್ತು 27 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ ಕರೆ ನೀಡಿವೆ ಎಂದು ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯ ದತ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬ್ಯಾಂಕಿಂಗ್ ಉದ್ಯಮವನ್ನು ಸಂಪೂರ್ಣವಾಗಿ ಮುಚ್ಚುವ 48 ಗಂಟೆಗಳ ಈ ಮುಷ್ಕರಕ್ಕೆ ಇತರೆ ಅನೇಕ ಸಂಘಗಳು ಮತ್ತು ಸಂಸ್ಥೆಗಳು ತಮ್ಮೊಂದಿಗೆ ಸೇರಿಕೊಳ್ಳಲಿವೆ ಎಂದು ದತ್ತಾ ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಸ್ಟ್ 30ರಂದು 10 ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ನಾಲ್ಕು ಬ್ಯಾಂಕ್‍ಗಳಿಗೆ ವಿಲೀನಗೊಳಿಸಿರುವ ಕುರಿತು ಘೋಷಣೆ ಮಾಡಿದ್ದರು. ಐದು ವರ್ಷಗಳ ಆರ್ಥಿಕತೆಯ ಕುಂಠಿತವನ್ನು ಸರಿ ದಾರಿಗೆ ತಂದು, ಬೆಳೆವಣಿಗೆಯತ್ತ ಕೊಂಡೊಯ್ಯಬೇಕು. ಹೀಗಾಗಿ ಸಣ್ಣ ಬ್ಯಾಂಕ್‍ಗಳನ್ನು ವಿಲೀನಗೊಳಿಸಿ ಬೃಹತ್ ಬ್ಯಾಂಕ್‍ಗಳನ್ನಾಗಿ ಮಾಡಿ, ವಿಶ್ವ ದರ್ಜೆಗೆ ಕೊಂಡೊಯ್ಯಬೇಕು ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


