ವಾಣಿಜ್ಯ

ಪ್ಯಾನ್-ಆಧಾರ್ ಸಂಖ್ಯೆ ಜೋಡಣೆ ಅವಧಿ ಡಿ.31ಕ್ಕೆ ವಿಸ್ತರಣೆ 

ಪ್ಯಾನ್ ಸಂಖ್ಯೆಯನ್ನು ಆಧಾರ್ ಸಂಖ್ಯೆ ಜೊತೆಗೆ ಜೋಡಣೆ ಮಾಡುವ ದಿನಾಂಕವನ್ನು ಕೇಂದ್ರ ಹಣಕಾಸು ಸಚಿವಾಲಯ ಸೆಪ್ಟೆಂಬರ್ 30ರಿಂದ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ. ಈ ಹಿಂದೆ ಮಾರ್ಚ್ 31ರಂದು 6 ತಿಂಗಳ ಅವಧಿಗೆ ವಿಸ್ತರಿಸಲಾಗಿತ್ತು.

ಪ್ಯಾನ್-ಆಧಾರ್ ಸಂಖ್ಯೆ ಜೋಡಣೆ ಅವಧಿ ಡಿ.31ಕ್ಕೆ ವಿಸ್ತರಣೆ 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪ್ಯಾನ್ ಸಂಖ್ಯೆಯನ್ನು ಆಧಾರ್ ಸಂಖ್ಯೆ ಜೊತೆಗೆ ಜೋಡಣೆ ಮಾಡುವ ದಿನಾಂಕವನ್ನು ಕೇಂದ್ರ ಹಣಕಾಸು ಸಚಿವಾಲಯ ಸೆಪ್ಟೆಂಬರ್ 30ರಿಂದ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ. ಈ ಹಿಂದೆ ಮಾರ್ಚ್ 31ರಂದು 6 ತಿಂಗಳ ಅವಧಿಗೆ ವಿಸ್ತರಿಸಲಾಗಿತ್ತು.


ಈ ದಿನಾಂಕದೊಳಗೆ ಪ್ಯಾನ್ ಸಂಖ್ಯೆಯನ್ನು ಆಧಾರ್ ಸಂಖ್ಯೆಯ ಜೊತೆ ಜೋಡಣೆ ಮಾಡಿಕೊಳ್ಳದಿದ್ದರೆ ಪ್ಯಾನ್ ಕಾರ್ಡು ನಿಷ್ಕ್ರಿಯವಾಗುತ್ತದೆ. ಕೇಂದ್ರ ಸರ್ಕಾರ ಜೋಡಣೆ ಅವಧಿಯನ್ನು ವಿಸ್ತರಿಸುತ್ತಿರುವುದು ಇದು ಏಳನೇ ಸಲ.


ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರದ ಫ್ಲಾಗ್ ಶಿಪ್ ಆಧಾರ್ ಯೋಜನೆ ಸಾಂವಿಧಾನಿಕವಾಗಿ ಮೌಲ್ಯಯುತವಾಗಿದ್ದು ಆದಾಯ ತೆರಿಗೆ ವಿವರ ಸಲ್ಲಿಕೆ ಮತ್ತು ಪ್ಯಾನ್ ಕಾರ್ಡು ಹಂಚಿಕೆಗೆ ಅತ್ಯಗತ್ಯ ಎಂದು ಆದೇಶ ಹೊರಡಿಸಿತ್ತು. 


ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 139ಎಎ(2), ಜುಲೈ 1, 2017ಕ್ಕೆ ಪ್ಯಾನ್ ಸಂಖ್ಯೆ ಹೊಂದಿರುವ ಪ್ರತಿಯೊಬ್ಬರೂ ಆಧಾರ್ ಸಂಖ್ಯೆ ಪಡೆಯಲು ಅರ್ಹರಾಗಿರುತ್ತಾರೆ. 


ಆಧಾರ್-ಪ್ಯಾನ್ ಜೋಡಣೆ ಹೇಗೆ: ನಿಮ್ಮ ಮೊಬೈಲ್ ಸಂಖ್ಯೆಯಿಂದ UIDPAN *space* 12 ಅಂಕೆಯ ಆಧಾರ್ ಸಂಖ್ಯೆ *space* 10 ಅಂಕೆಯ ಪ್ಯಾನ್ ಸಂಖ್ಯೆಯನ್ನು ಟೈಪ್ ಮಾಡಿ 567678 ಅಥವಾ 56161ನ್ನು ಸಂದೇಶ ಕಳುಹಿಸಿ.


ಉದಾಹರಣೆಗೆ ಈ ರೀತಿ: UIDPAN 012345678910 ABCDE1964F

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.