ಕೇಂದ್ರಕ್ಕೆ 1.76 ಲಕ್ಷ ಕೋಟಿ ವರ್ಗಾಯಿಸಲು ಆರ್‌ಬಿಐ ರೆಡಿ!
ಕೇಂದ್ರ ಸರ್ಕಾರಕ್ಕೆ 1.76 ಲಕ್ಷ ಕೋಟಿ ಮೊತ್ತವನ್ನು ವರ್ಗಾಯಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಸಮ್ಮತಿಸಿದೆ.

ಮುಂಬೈ: ಕೇಂದ್ರ ಸರ್ಕಾರಕ್ಕೆ 1.76 ಲಕ್ಷ ಕೋಟಿ ಮೊತ್ತವನ್ನು ವರ್ಗಾಯಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಸಮ್ಮತಿಸಿದೆ.
ಆರ್‌ಬಿಐ ತನ್ನ ಬಳಿ ಇರುವ ಹೆಚ್ಚುವರಿ ಬಂಡವಾಳದಲ್ಲಿನ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲಿದೆ. ಆರ್‌ಬಿಐ ಮಾಜಿ ಗವರ್ನರ್ ಬಿಮಲ್ ಜಲನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಮಾಡಿದ್ದ ಶಿಫಾರಸುಗಳನ್ನು ಕೇಂದ್ರೀಯ ಬ್ಯಾಂಕ್ ನ ನಿರ್ದೇಶನ ಮಂಡಳಿಯು ಒಪ್ಪಿಕೊಂಡಿದೆ. ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
2018-19ನೇ ಹಣಕಾಸು ವರ್ಷಕ್ಕೆ 1,23,414 ಕೋಟಿ ಮೊತ್ತವನ್ನು ಹೆಚ್ಚುವರಿ ನಿಧಿ ರೂಪದಲ್ಲಿ ಮತ್ತು 52,637 ಕೋಟಿಯು ಬ್ಯಾಂಕ್ ನ ಪರಿಷ್ಕೃತ ನಿಧಿಯಲ್ಲಿನ ಹೆಚ್ಚುವರಿ ಮೊತ್ತದ ರೂಪದಲ್ಲಿ ಇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


