ವಾಣಿಜ್ಯ

ಕೊರೋನಾ ಅಬ್ಬರದ ನಡುವೆ 7 ವರ್ಷಗಳಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿದ ಚಿನ್ನದ ಬೆಲೆ!

ಜಗತ್ತಿನಾದ್ಯಂತ ಕೊರೋನ ಹಾವಳಿ ಮತ್ತಷ್ಟು ಹೆಚ್ಚಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಕಳೆದ ಏಳು ವರ್ಷಗಳಲ್ಲೇ ಅತ್ಯಂತ ಎತ್ತರಕ್ಕೆ ಹೋಗಿದೆ .ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಹೂಡಿಕೆದಾರರು ಹೆಚ್ಚಿನ ಒಲವು ತೋರುತ್ತಿದ್ದಾರೆ.

ಕೊರೋನಾ ಅಬ್ಬರದ ನಡುವೆ 7 ವರ್ಷಗಳಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿದ ಚಿನ್ನದ ಬೆಲೆ!
ಸಂಗ್ರಹ ಚಿತ್ರ
Published On :

ನವದೆಹಲಿ:  ಜಗತ್ತಿನಾದ್ಯಂತ ಕೊರೋನ ಹಾವಳಿ ಮತ್ತಷ್ಟು ಹೆಚ್ಚಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಕಳೆದ ಏಳು ವರ್ಷಗಳಲ್ಲೇ ಅತ್ಯಂತ ಎತ್ತರಕ್ಕೆ ಹೋಗಿದೆ .ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಹೂಡಿಕೆದಾರರು ಹೆಚ್ಚಿನ ಒಲವು ತೋರುತ್ತಿದ್ದಾರೆ.

ವಿಶ್ವದ ಆರ್ಥಿಕತೆಯು ಕರೋನದಿಂದ ಅತ್ಯಂತ ಸಂಕಷ್ಟಕ್ಕೆ ಸಿಲುಕಿದ್ದು, ಆರ್ಥಿಕ ಹಿಂಜರಿತವನ್ನು ಪ್ರವೇಶಿಸಿದೆ. ಹೀಗಾಗಿ ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಹೂಡಿಕೆದಾರರು ಒಲವು ತೋರುತ್ತಿದ್ದಾರೆ.

ಅಮೆರಿಕಾದಲ್ಲಿ ಎದುರಾಗಿರುವ ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅಮೆರಿಕ ಸ್ ಫೆಡರಲ್ ರಿಸರ್ವ್ ಬ್ಯಾಂಕ್ ಅನೇಕ ವ್ಯಾಪಕ, ಮಹತ್ವದ ನಿರ್ಧಾರಗಳನ್ನು ತೆಗದುಕೊಂಡಿದೆ. ಹೀಗಾಗಿ ಚಿನ್ನವು ಕಳೆದ ಏಳು ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿದೆ. 

ಯುಎಸ್ ಫೆಡರಲ್ 2.3 ಟ್ರಿಲಿಯನ್ ಡಾಲರ್ ಅನ್ನು ಹೆಚ್ಚುವರಿ ಸಹಾಯವಾಗಿ ಗುರುವಾರ ಘೋಷಿಸಿದೆ. ಕೊರೊನಾ ಲಾಕ್ಡೌನ್ನಿಂದಾಗಿ ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಹೆಚ್ಚುತ್ತಿದ್ದು, ಸತತ ಮೂರನೆ ವಾರವು ನಿರುದ್ಯೋಗದ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ ಎಂದೂ ವರದಿಯಾಗಿದೆ. 

ನ್ಯೂಯಾರ್ಕ್ ಕಾಮೆಕ್ಸ್ನಲ್ಲಿ ಚಿನ್ನದ ಬೆಲೆಯು ಶೇಕಡ 4.1 ಪರ್ಸೆಂಟ್ ಏರಿಕೆಯಾಗಿ 1,752 ಡಾಲರ್ ಗೆ ತಲುಪಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.