ಕೋವಿಡ್-19: ಐಟಿ ರಿಟರ್ನ್ಸ್ ಫಾರ್ಮ್ ಪರಿಷ್ಕರಣೆ ಮಾಡಿದ ಆದಾಯ ತೆರಿಗೆ ಇಲಾಖೆ!
ಲಾಕ್ ಡೌನ್ ಹಿನ್ನೆಲೆಯಲ್ಲಿ ಹಲವು ಯೋಜನಗಳ ಅವಧಿಯನ್ನು ವಿಸ್ತರಿಸಲಾಗಿದ್ದು ಇದರ ಲಾಭ ತೆರಿಗೆ ಪಾವತಿ ಮಾಡುವವರಿಗೆ ಲಭ್ಯವಾಗುವಂತೆ ಮಾಡಲು ಆದಾಯ ತೆರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಹಲವು ಯೋಜನಗಳ ಅವಧಿಯನ್ನು ವಿಸ್ತರಿಸಲಾಗಿದ್ದು ಇದರ ಲಾಭ ತೆರಿಗೆ ಪಾವತಿ ಮಾಡುವವರಿಗೆ ಲಭ್ಯವಾಗುವಂತೆ ಮಾಡಲು ಆದಾಯ ತೆರಿಗೆ ಇಲಾಖೆ ಕ್ರಮ ಕೈಗೊಂಡಿದೆ.
ಲಾಕ್ ಡೌನ್ ವಿಸ್ತರಣೆಯ ಲಾಭವನ್ನು ತೆರಿಗೆ ಪಾವತಿದಾರರಿಗೆ ನೀಡಲು ಐ-ಟಿ ರಿಟರ್ನ್ ಫಾರ್ಮ್ ಗಳನ್ನು ಪರಿಷ್ಕರಣೆ ಮಾಡಿದೆ.
ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರ 1961ರ ಆದಾಯ ತೆರಿಗೆ ಕಾಯ್ದೆಯಡಿ, ಹಲವು ಯೋಜನೆಗಳ ಅವಧಿಯನ್ನು 2020ರ ಜೂನ್ 30ರವರೆಗೆ ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರು 2020ರ ಎಪ್ರಿಲ್ 1 ರಿಂದ ಜೂನ್ 30ರವರೆಗೆ ನಡೆಸಿದ ವ್ಯವಹಾರಗಳ ಮೇಲಿನ ರಿಟರ್ನ್ಸ್ ಪಡೆಯಲು ಅನುಕೂಲವಾಗುವಂತೆ 2019-20ರ ಆರ್ಥಿಕ ಸಾಲಿನ ‘ರಿಟರ್ನ್ ಫಾರ್ಮ್ಸ್’ನಲ್ಲಿ ಸೂಕ್ತ ಪರಿಷ್ಕರಣೆ ಮಾಡಲಾಗುತ್ತಿದೆ.
ಅಗತ್ಯ ಬದಲಾವಣೆಗಳನ್ನು ಸೇರಿಸಿದ ನಂತರ ಮೇ 30ರೊಳಗೆ ರಿಟರ್ನ್ ಫೈಲಿಂಗ್ ಸೌಲಭ್ಯ ಸಿಗುವಂತೆ ಮಾಡಲಾಗುವುದು ಎಂದು ಸಿಬಿಡಿಟಿ (ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


