ವಾಣಿಜ್ಯ

ತೈಲ ಬೆಲೆ ಕುಸಿತದಿಂದ ಸರ್ಕಾರಿ ಒಡೆತನದ ಒಐಎಲ್‌ಗೆ ನಷ್ಟ, ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುತ್ತಿದೆ ಜನಾಕ್ರೋಶ!

ದೇಶದ ಎರಡನೇ ಅತಿದೊಡ್ಡ ಸರ್ಕಾರಿ ಒಡೆತನದ ತೈಲ ಮತ್ತು ಅನಿಲ ಉತ್ಪಾದಕ ಆಯಿಲ್ ಇಂಡಿಯಾ ಲಿಮಿಟೆಡ್(ಒಐಎಲ್) ಕಂಪನಿ ಇತಿಹಾಸದಲ್ಲಿ ಎರಡನೇ ಬಾರಿಗೆ ನಷ್ಟ ಅನುಭವಿಸಿದೆ.

ತೈಲ ಬೆಲೆ ಕುಸಿತದಿಂದ ಸರ್ಕಾರಿ ಒಡೆತನದ ಒಐಎಲ್‌ಗೆ ನಷ್ಟ, ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುತ್ತಿದೆ ಜನಾಕ್ರೋಶ!
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದ ಎರಡನೇ ಅತಿದೊಡ್ಡ ಸರ್ಕಾರಿ ಒಡೆತನದ ತೈಲ ಮತ್ತು ಅನಿಲ ಉತ್ಪಾದಕ ಆಯಿಲ್ ಇಂಡಿಯಾ ಲಿಮಿಟೆಡ್(ಒಐಎಲ್) ಕಂಪನಿ ಇತಿಹಾಸದಲ್ಲಿ ಎರಡನೇ ಬಾರಿಗೆ ನಷ್ಟ ಅನುಭವಿಸಿದೆ.

ಕಚ್ಚಾ ತೈಲ ಬೆಲೆಗಳು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾದ ನಂತರ ಆಯಿಲ್ ಇಂಡಿಯಾ ಲಿಮಿಟೆಡ್ ಎರಡನೇ ಬಾರಿಗೆ ನಷ್ಟ ಕಂಡಿದೆ. ಹಿಂದಿನ ಅವಧಿಗೆ ಇದೇ ಅವಧಿಯಲ್ಲಿ 624.80 ಕೋಟಿರೂಪಾಯಿ  ನಿವ್ವಳ ಲಾಭಗಳಿಸಿತ್ತು.

2020-21ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 248 ಕೋಟಿರೂಪಾಯಿ ನಿವ್ವಳ ನಷ್ಟ ದಾಖಲಿಸಿದೆ. ಇದು ಒಐಎಲ್ ಇತಿಹಾಸದಲ್ಲೇ ಎರಡನೇ ತ್ರೈಮಾಸಿಕ ನಷ್ಟವಾಗಿದೆ ಎಂದು ಒಐಎಲ್ ಹಣಕಾಸು ನಿರ್ದೇಶಕರು  ಹೇಳಿದ್ದಾರೆ.

ಪೆಟ್ರೋಲ್ ಬೆಲೆ ನಿರಂತರ ಏರಿಕೆ, ಹೆಚ್ಚುತ್ತಿರುವ ಜನಾಕ್ರೋಶ
ತೈಲ ಕಂಪನಿಗಳು ಕಳೆದ ಆರು ದಿನಗಳಿಂದ ಪೆಟ್ರೋಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿವೆ. ಆಗಸ್ಟ್ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ, 17ರಂದು 16 ಪೈಸೆ, 18ರಂದು 17 ಪೈಸೆ, 20ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 10 ಪೈಸೆ, 21ರಂದು 19 ಪೈಸೆ, ಇಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 16 ಪೈಸೆ ಹೆಚ್ಚಿಸಲಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 81 ರೂಪಾಯಿ ಆಗಿದೆ. ಇನ್ನು ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ 83.83 ರುಪಾಯಿ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.