ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿಸಲು ನುರಿತ ಮಾನವಶಕ್ತಿ ಅತ್ಯಗತ್ಯ: ನಿತಿನ್ ಗಡ್ಕರಿ
ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ನುರಿತ ಮಾನವಶಕ್ತಿ ಅತ್ಯಗತ್ಯ ಎಂದು ಕೇಂದ್ರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಸಚಿವ ನಿತಿನ್ ಗಡ್ಕರಿ ಸೋಮವಾರ ಪ್ರತಿಪಾದಿಸಿದ್ದಾರೆ.

ನವದೆಹಲಿ: ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ನುರಿತ ಮಾನವಶಕ್ತಿ ಅತ್ಯಗತ್ಯ ಎಂದು ಕೇಂದ್ರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಸಚಿವ ನಿತಿನ್ ಗಡ್ಕರಿ ಸೋಮವಾರ ಪ್ರತಿಪಾದಿಸಿದ್ದಾರೆ.
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿಯಲ್ಲಿ ಸ್ಥಾಪಿಸಲಾಗಿರುವ ತಂತ್ರಜ್ಞಾನ ಕೇಂದ್ರವನ್ನು ಸೋಮವಾರ ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಗಡ್ಕರಿ, ದೇಶದ ಜಿಡಿಪಿಯಲ್ಲಿ ಉತ್ಪಾದನಾ ವಲಯ ಶೇ 22 ರಿಂದ 24 ರಷ್ಟು ಕೊಡುಗೆ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ 'ಆತ್ಮನಿರ್ಭರ್ ಭಾರತ್' ಕರೆಯ ಹಿನ್ನೆಲೆಯಲ್ಲಿ ಸರ್ಕಾರ 15 ಹೊಸ ತಂತ್ರಜ್ಞಾನ ಕೇಂದ್ರಗಳನ್ನು (ಟಿಸಿಗಳು) ಸ್ಥಾಪಿಸುತ್ತಿದೆ.
ನುರಿತ ಮಾನವಶಕ್ತಿ ಸೃಷ್ಟಿಸಲು ಸದ್ಯ ಅಸ್ತಿತ್ವದಲ್ಲಿರುವ 18 ತಂತ್ರಜ್ಞಾನ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ದೇಶವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ನುರಿತ ಮಾನವಶಕ್ತಿ ಅತ್ಯಗತ್ಯ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


