ಇಂದು ರಾತ್ರಿಯಿಂದಲೇ ದಿನದ 24 ಗಂಟೆ ಆರ್‌ಟಿಜಿಎಸ್ ಸೇವೆ: ಆರ್ಬಿಐ ಗರ್ವನರ್ ಶಕ್ತಿಕಾಂತ ದಾಸ್
ರಿಯಲ್ ಟೈಮ್ ಗ್ರಾಸ್ ಸೆಟ್ಲ್ ಮೆಂಟ್(ಆರ್‌ಟಿಜಿಎಸ್) ವ್ಯವಸ್ಥೆ ಇಂದು ಮಧ್ಯರಾತ್ರಿಯಿಂದ ದಿನದ 24 ಗಂಟೆ ಕಾರ್ಯ ನಿರ್ವಹಣೆ ಮಾಡಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ನವದೆಹಲಿ: ರಿಯಲ್ ಟೈಮ್ ಗ್ರಾಸ್ ಸೆಟ್ಲ್ ಮೆಂಟ್(ಆರ್‌ಟಿಜಿಎಸ್) ವ್ಯವಸ್ಥೆ ಇಂದು ಮಧ್ಯರಾತ್ರಿಯಿಂದ ದಿನದ 24 ಗಂಟೆ ಕಾರ್ಯ ನಿರ್ವಹಣೆ ಮಾಡಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಎರಡು ವರ್ಷ ಪೂರೈಸಿರುವ ಶಕ್ತಿಕಾಂತ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಡಿ.1ರಿಂದಲೇ ದೇಶದಲ್ಲಿ ಜಾರಿಗೆ ಬರಬೇಕಾಗಿತ್ತು. ಆದರೆ, ವಿಳಂಬವಾದರೂ ಸೋಮವಾರದಿಂದ ಜಾರಿಗೆ ಬರುತ್ತಿದ್ದು ಇಂತಹ ಸೌಲಭ್ಯ ಕಲ್ಪಿಸಿದ ಕೆಲವೇ ದೇಶಗಳ ಸಾಲಿಗೆ ಭಾರತವೂ ಸೇರ್ಪಡೆಯಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಡಿಸೆಂಬರ್ 13ರ ಮಧ್ಯರಾತ್ರಿ ನಂತರ ಆರ್ ಟಿಜಿಎಸ್ ಸೌಲಭ್ಯವಿಸ್ತರಣೆ ಜಾರಿಗೊಳ್ಳಲಿದೆ. ಬ್ಯಾಂಕ್ ಖಾತೆಗಳಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮೇಲಿದ್ದ ಶುಲ್ಕ ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗ್ರಾಹಕರಿಗೆ ಈ ಮೂಲಕ ಮತ್ತೊಂದು ಶುಭ ಸುದ್ದಿ ದೊರಕಿದೆ . ಕಳೆದ ಡಿಸೆಂಬರ್ ತಿಂಗಳಿನಿಂದ ನೆಫ್ಟ್ ಕೂಡಾ ದಿನದ 24 ಗಂಟೆಗಳ ಕಾಲ ಬಳಕೆಗೆ ಲಭ್ಯವಾಗಿದೆ. ಇದಕ್ಕೂ ಮುನ್ನ ನೆಫ್ಟ್ ಕೇವಲ ಬೆಳಗ್ಗೆ 8 ರಿಂದ ರಾತ್ರಿ 7ರ ತನಕ ಮಾತ್ರ ಲಭ್ಯವಿತ್ತು. ಅಲ್ಲದೆ ಎರಡನೇ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಬಳಕೆ ಮಾಡಲು ಸಾಧ್ಯವಾಗುತ್ತಿರಲಿಲ್ಲ.
ಈ ವ್ಯವಸ್ಥೆ ಸಕ್ರಿಯಗೊಳಿಸುವಿಕೆಯೊಂದಿಗೆ ಹಿಂದಿನ ಐದು ದಿನಗಳ ಹಿಂದಿನ ಬದಲಾಗಿ ವಾರದ ಎಲ್ಲಾ ದಿನಗಳಲ್ಲಿ ಎಇಪಿಎಸ್, ಐಎಂಪಿಎಸ್, ಎನ್‌ಇಟಿಸಿ, ಎನ್‌ಎಫ್‌ಎಸ್, ರುಪೇ, ಯುಪಿಐ ವಹಿವಾಟುಗಳ ಇತ್ಯರ್ಥಕ್ಕೆ ಅನುಕೂಲವಾಗಲಿದೆ. ಇದು ಪಾವತಿ ಪರಿಸರ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲಿದೆ.
ಆರ್‌ಟಿಜಿಎಸ್ ಅನ್ನು ದೊಡ್ಡ ಮೊತ್ತವನ್ನು ತತ್ ಕ್ಷಣ ವರ್ಗಾವಣೆ ಮಾಡಲು ಬಳಸಲಾಗುತ್ತಿದೆ. ಎನ್‌ಇಎಫ್‌ಟಿಯನ್ನು 2 ಲಕ್ಷ ರೂ.ಗಳವರೆಗೆ ಹಣ ವರ್ಗಾವಣೆಗೆ ಬಳಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


