ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.5.15 ಯಥಾಸ್ಥಿತಿ ಮುಂದುವರಿಕೆ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ 2019-20ನೇ ಸಾಲಿನ 6ನೇ ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ್ದು ರೆಪೊ ದರದಲ್ಲಿ ಯಾವುದೇ ವ್ಯತ್ಯಾಸಗಳನ್ನು ಮಾಡದೆ ಶೇಕಡಾ 5.15ರ ಯಥಾಸ್ಥಿತಿ ಮುಂದುವರಿಸಿದೆ.

ಹೈದರಾಬಾದ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ 2019-20ನೇ ಸಾಲಿನ 6ನೇ ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ್ದು ರೆಪೊ ದರದಲ್ಲಿ ಯಾವುದೇ ವ್ಯತ್ಯಾಸಗಳನ್ನು ಮಾಡದೆ ಶೇಕಡಾ 5.15ರ ಯಥಾಸ್ಥಿತಿ ಮುಂದುವರಿಸಿದೆ.
ಪ್ರಸಕ್ತ ಹಣಕಾಸು ವರ್ಷದ ಕೊನೆಯ ವಿತ್ತೀಯ ನೀತಿ ಇದಾಗಿದ್ದು, ಇಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದ ಹಣಕಾಸು ವಿತ್ತೀಯ ಸಮಿತಿ ಹಣದುಬ್ಬರದ ಸ್ಥಿತಿಗತಿ ಮತ್ತು ಕಾರಣಗಳನ್ನು ತಿಳಿದುಕೊಳ್ಳುವವರೆಗೆ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದೆ.ಅದೇ ರೀತಿ ರಿವರ್ಸ್ ರೆಪೊ ದರವನ್ನು ಕೂಡ ಬದಲಾಗದೆ ಶೇಕಡಾ 4.9ರಷ್ಟು ಯಥಾಸ್ಥಿತಿ ಮುಂದುವರಿದಿದೆ.
2020-21ರ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಶೇಕಡಾ 6ರಷ್ಟಿರಬಹುದು ಎಂದು ಅಂದಾಜಿಸಲಾಗಿದೆ.ಇದರಿಂದ ಸಾಲದ ಮೇಲಿನ ಬಡ್ಡಿದರದಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ.
ರೆಪೊ ದರ: ಹಣದ ಕೊರತೆ ಸಂದರ್ಭದಲ್ಲಿ ದೇಶದ ವಾಣಿಜ್ಯ ಬ್ಯಾಂಕುಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೀಡುವ ಸಾಲದ ಮೇಲೆ ವಿಧಿಸುವ ದರವನ್ನು ರೆಪೊ ದರ ಎನ್ನುತ್ತಾರೆ. ಹಣದುಬ್ಬರ ನಿಯಂತ್ರಣಕ್ಕೆ ವಿತ್ತೀಯ ಅಧಿಕಾರಿಗಳು ಇದನ್ನು ಬಳಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


