ಸರಕು ಮತ್ತು ಸೇವಾ ತೆರಿಗೆ ಜಾಗೃತಿ ಕ್ರಮಕ್ಕೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೂಚನೆ
ಸರಕು ಮತ್ತು ಸೇವಾ ತೆರಿಗೆ -ಜಿಎಸ್ಟಿ ಕುರಿತಂತೆ ಸ್ಥಳೀಯ ಮತ್ತು ಜಿಲ್ಲಾಮಟ್ಟದಲ್ಲಿ ಜಾಗೃತಿ ಕಾರ್ಯವನ್ನು ಚುರುಕುಗೊಳಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ಜಿಎಸ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ -ಜಿಎಸ್ಟಿ ಕುರಿತಂತೆ ಸ್ಥಳೀಯ ಮತ್ತು ಜಿಲ್ಲಾಮಟ್ಟದಲ್ಲಿ ಜಾಗೃತಿ ಕಾರ್ಯವನ್ನು ಚುರುಕುಗೊಳಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ಜಿಎಸ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಎಸ್ಟಿ ಕುರಿತಂತೆ ಅನೇಕ ವರ್ತಕ ಪ್ರತಿನಿಧಿಗಳ ಸಂದೇಹ, ಸ್ಪಷ್ಟನೆಗಳಿಗೆ ಪ್ರತಿಕ್ರಯಿಸಿರುವ ಸಚಿವರು ಜಿಎಸ್ಟಿ ಕುರಿತ ಸಂದೇಹ ನಿವಾರಣೆಗೆ ಜಿಲ್ಲಾಮಟ್ಟದ ಸಂವಹನ ಕಾರ್ಯಕ್ರಮಗಳನ್ನು ನಡೆಸುವಂತೆ, ಎಲ್ಲಾ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಎಸ್ಟಿ ಅನುಷ್ಠಾನವಾಗಿ ೩ ವರ್ಷಗಳಾಗುತ್ತಿದ್ದು, ಈ ಕುರಿತಂತೆ ಯಾವುದೇ ಸಂದೇಹ ಇರಬಾರದು ಎಂದು ಅಭಿಪ್ರಾಯಪಟ್ಟ ಅವರು, ಸಂದೇಹ ನಿವಾರಣೆಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಳೆದ ವರ್ಷದ ಏಪ್ರಿಲ್ನಿಂದ ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗಿದೆ ಎಂದರು. ಜಿಎಸ್ಟಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ ರಾಜ್ಯಸರ್ಕಾರಗಳ ಜವಾಬ್ದಾರಿ ಕೂಡ ಇದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


