ಮತ್ತೆ ಕರ್ನಾಟಕಕ್ಕೆ ಜಿಎಸ್ಟಿ ಪರಿಹಾರ ವಿಳಂಬ, ಆತಂಕ ವ್ಯಕ್ತಪಡಿಸಿದ ಅಧಿಕಾರಿಗಳು!
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಬೆಂಗಳೂರು: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.
ಇನ್ನು ಡಿಸೆಂಬರ್-ಜನವರಿಯ ಪರಿಹಾರ ಮೊತ್ತ ಅಂದಾಜು 3,200 ಕೋಟಿ ರೂ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಪಾವತಿಸಲು ನಿರ್ಧರಿಸಲಾಗಿದೆ. ಆದರೆ ಸತತ ಪಾವತಿ ವಿಳಂಬದಿಂದಾಗಿ ರಾಜ್ಯ ತಲ್ಲಣಗೊಂಡಿದೆ. ಸಂವಹನದ ಕೊರತೆಯಿಂದಾಗಿ ಈ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ.
ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಹಲವು ಪತ್ರಗಳನ್ನು ರವಾನಿಸಿದ್ದು ಸ್ವೀಕೃತಿ ಪತ್ರ ಮಾತ್ರ ಬರುತ್ತಿದ್ದು ಪರಿಹಾರ ವಿಳಂಬಕ್ಕೆ ಯಾವುದೇ ಸ್ಪಷ್ಟೀಕರಣ ಸಿಕ್ಕಿಲ್ಲ. ಈ ಬಾಕಿ ಹಣವನ್ನು ಯಾವಾಗ ಪಡೆಯಬಹುದು ಎಂಬ ಭರವಸೆ ಕೂಡ ಇಲ್ಲ ಎಂದು ರಾಜ್ಯದ ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನ ರಾಜ್ಯ ಸರ್ಕಾರ ಮಾರ್ಚ್ 5ರಂದು 2020-21ರ ಹಣಕಾಸು ಬಜೆಟ್ ಅನ್ನು ಮಂಡಿಸಲು ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


