ವಾಣಿಜ್ಯ

ಡಿಎಫ್ಎಚ್ಎಲ್ ನಿಂದ 3,688 ಕೋಟಿ ರೂ. ವಂಚನೆ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಆರ್ ಬಿಐಗೆ ವರದಿ ಸಲ್ಲಿಕೆ

ದೇವನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(ಡಿಎಚ್ಎಫ್ಎಲ್)ನಿಂದ ರಿಸರ್ವ್ ಬ್ಯಾಂಕಿಗೆ ಒಟ್ಟು 3 ಸಾವಿರದ 688.58 ಕೋಟಿ ರೂಪಾಯಿ ಅನುತ್ಪಾದಕ ಆಸ್ತಿ(ಎನ್ ಪಿಎ) ಮೊತ್ತ ವಂಚನೆಯಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ.

ಡಿಎಫ್ಎಚ್ಎಲ್ ನಿಂದ 3,688 ಕೋಟಿ ರೂ. ವಂಚನೆ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಆರ್ ಬಿಐಗೆ ವರದಿ ಸಲ್ಲಿಕೆ
ಸಾಂದರ್ಭಿಕ ಚಿತ್ರ
Published On :

ಮುಂಬೈ: ದೇವನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(ಡಿಎಚ್ಎಫ್ಎಲ್)ನಿಂದ ರಿಸರ್ವ್ ಬ್ಯಾಂಕಿಗೆ ಒಟ್ಟು 3 ಸಾವಿರದ 688.58 ಕೋಟಿ ರೂಪಾಯಿ ಅನುತ್ಪಾದಕ ಆಸ್ತಿ(ಎನ್ ಪಿಎ) ಮೊತ್ತ ವಂಚನೆಯಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ.
ಫೈನಾನ್ಸ್ ಕಂಪೆನಿಯು ಪಡೆದ ಒಟ್ಟು 97 ಸಾವಿರ ಕೋಟಿ ರೂಪಾಯಿಗಳ ಬ್ಯಾಂಕ್ ಸಾಲಗಳಲ್ಲಿ 31 ಸಾವಿರ ಕೋಟಿ ರೂಪಾಯಿಗಳನ್ನು ವಂಚಿಸಿದೆ ಎಂದು ವರದಿಯಲ್ಲಿ ಹೇಳಿದೆ.

ಕಂಪೆನಿ ಕಡೆಯಿಂದ ಬ್ಯಾಂಕಿಗೆ 3 ಸಾವಿರದ 688 ಕೋಟಿ ರೂಪಾಯಿ ವಂಚನೆಯಾಗಿದೆ ಎಂದು ಆರ್ ಬಿಐಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ ಎಂದು ಷೇರು ವಿನಿಮಯ ಸಲ್ಲಿಕೆ ವೇಳೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ.

Story image

ಕಳೆದ ನವೆಂಬರ್ ತಿಂಗಳಲ್ಲಿ ಡಿಎಚ್ ಎಲ್ ಎಫ್ ನಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದ ನಂತರ ರಿಸರ್ವ್ ಬ್ಯಾಂಕ್ ಡಿಎಚ್ಎಲ್ಎಫ್ ಗೆ ದಿವಾಳಿತನ ನಿಯಮದಡಿ ನೊಟೀಸ್ ಕಳುಹಿಸಿತ್ತು. ಎಸ್ಎಫ್ಐಒ ಸೇರಿದಂತೆ ಹಲವು ತನಿಖಾ ಸಂಸ್ಥೆಗಳು ಡಿಎಚ್ಎಲ್ಎಫ್ ವಿರುದ್ಧ ತನಿಖೆ ಆರಂಭಿಸಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.