ವಾಣಿಜ್ಯ

83 ದಿನಗಳ ಬಳಿಕ ಇಂಧನ ದರ ಪರಿಷ್ಕರಣೆ ಆರಂಭ; ಪೆಟ್ರೋಲ್, ಡೀಸೆಲ್ ದರ ಏರಿಕೆ!

ಕೊರೋನಾ ವೈರಸ್ ಲಾಕ್ ಡೌನ್ ಸೇರಿದಂತೆ ಸತತ 83 ದಿನಗಳ ವಿರಾಮದ ಬಳಿಕ ದೇಶಾದ್ಯಂತ ಇಂಧನ ದರ ಪರಿಷ್ಕರಣೆ ಪುನಾರಂಭಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದೆ.

83 ದಿನಗಳ ಬಳಿಕ ಇಂಧನ ದರ ಪರಿಷ್ಕರಣೆ ಆರಂಭ; ಪೆಟ್ರೋಲ್, ಡೀಸೆಲ್ ದರ ಏರಿಕೆ!
ಸಂಗ್ರಹ ಚಿತ್ರ
Published On :

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಸೇರಿದಂತೆ ಸತತ 83 ದಿನಗಳ ವಿರಾಮದ ಬಳಿಕ ದೇಶಾದ್ಯಂತ ಇಂಧನ ದರ ಪರಿಷ್ಕರಣೆ ಪುನಾರಂಭಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದೆ.

ಕೊರೋನಾ ವೈರಸ್ ಲಾಕ್ ಡೌನ್ ಮುಕ್ತಾಯದ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ದೈನಂದಿನ ಬೆಲೆ ಪರಿಷ್ಕರಣೆಯನ್ನು ಪುನರಾರಂಭಿಸಿದ್ದು, ಭಾನುವಾರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ತಲಾ 60 ಪೈಸೆ ಏರಿಕೆಯನ್ನು ಮಾಡಲಾಗಿದೆ. ಅದರಂತೆ ದೆಹಲಿಯಲ್ಲಿ ಶನಿವಾರ ಪ್ರತಿ ಲೀ.ಗೆ 71.26 ರೂ.ಇದ್ದು ಪೆಟ್ರೋಲ್ ಬೆಲೆ ಭಾನುವಾರ 71.86 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 69.39 ರೂ.ನಿಂದ 69.99 ರೂ.ಗೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 63 ಪೈಸೆ ಏರಿಕೆಯಾಗಿದ್ದು, ಶನಿವಾರ  73.55 ಪೈಸೆ ಇದ್ದ ಪೆಟ್ರೋಲ್ ದರ, ಭಾನುವಾರ 74.18 ರೂಗೆ ಏರಿಕೆಯಾಗಿದೆ. ಅಂತೆಯೇ ಪ್ರತೀ ಲೀಟರ್ ಡೀಸೆಲ್ ದರದಲ್ಲಿ ಕೂಡ 58 ಪೈಸೆ ಏರಿಕೆಯಾಗಿದ್ದು, ಶನಿವಾರ  65.96 ರೂ ಇದ್ದ ಡೀಸೆಲ್ ಭಾನುವಾರ 66.54ರೂ ಗೆ ಏರಿಕೆಯಾಗಿದೆ. 

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಎಟಿಎಫ್ ಮತ್ತು ಎಲ್‌ಪಿಜಿ ಬೆಲೆಗಳನ್ನು ನಿಯಮಿತವಾಗಿ ಪರಿಷ್ಕರಿಸುತ್ತಿದ್ದರೂ ಮೇಲ್ನೋಟಕ್ಕೆ ಕಂಡು ಬಂದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೀವ್ರ ಏರಿಳಿತದ ಹಿನ್ನೆಲೆಯಲ್ಲಿ ಮಾ.16ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆಯನ್ನು ತಡೆಹಿಡಿದಿದ್ದವು. ಇದಕ್ಕೂ ಮುನ್ನ ಜಾಗತಿಕ ಬೆಲೆ ಕುಸಿತದ ಲಾಭವನ್ನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು ಇವೆರಡೂ ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ ತಲಾ ಮೂರು ರೂ.ಗಳಷ್ಟು ಹೆಚ್ಚಿಸಿತ್ತು. ಮೇ 6ರಂದು ಸರ್ಕಾರ ಮತ್ತೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ 10 ರೂ. ಮತ್ತು ಡೀಸೆಲ್‌ಗೆ 13 ರೂ.ಹೆಚ್ಚಿಸಿತ್ತು. ಜಾಗತಿಕ ಕಚ್ಚಾ ತೈಲ ಬೆಲೆಗಳು ಕುಸಿದಿದ್ದ ಹಿನ್ನೆಲೆಯಲ್ಲಿ ತೈಲ ಮಾರಾಟ ಕಂಪನಿಗಳು ಈ ಏರಿಕೆಯನ್ನು ಗ್ರಾಹಕರಿಗೆ ವರ್ಗಾಯಿಸಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.