ವಾಣಿಜ್ಯ

ಮುಂದುವರೆದ ತೈಲೋತ್ಪನ್ನಗಳ ದರ ಹೆಚ್ಚಳ; ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ, ಡೀಸೆಲ್ 58 ಪೈಸೆ ಏರಿಕೆ

ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆ ಮುಂದುವರೆದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 58 ಪೈಸೆ ಏರಿಕೆಯಾಗಿದೆ.

ಮುಂದುವರೆದ ತೈಲೋತ್ಪನ್ನಗಳ ದರ ಹೆಚ್ಚಳ; ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ, ಡೀಸೆಲ್ 58 ಪೈಸೆ ಏರಿಕೆ
ಪೆಟ್ರೋಲ್ ದರ ಕಡಿತ
Published On :

ನವದೆಹಲಿ: ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆ ಮುಂದುವರೆದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 58 ಪೈಸೆ ಏರಿಕೆಯಾಗಿದೆ.

ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಕಳೆದ ಎರಡು ತಿಂಗಳು ಜಾಗತಿಕವಾಗಿ ತೈಲ ಬೇಡಿಕೆ ಕುಸಿದು, ಬ್ರೆಂಟ್‌ ಕಚ್ಚಾ ತೈಲ ಫ್ಯೂಚರ್ಸ್‌ ದರ ದಾಖಲೆಯ ಇಳಿಕೆಯಾದರೂ ಭಾರತದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಕೆಯಾಗಲಿಲ್ಲ. ಲಾಕ್‌ ಡೌನ್‌ ಸಡಿಲಿಕೆಯಾಗಿ ಬೇಡಿಕೆ ಹೆಚ್ಚುತ್ತಿದ್ದಂತೆ ದಿನೇ ದಿನೇ ದರ ಹೆಚ್ಚಳ ಸಾಮಾನ್ಯವಾಗಿದೆ. ಸತತ 16 ದಿನಗಳಿಂದ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಕಾಣುತ್ತಿದ್ದು, ಇದೀಗ ಸೋಮವಾರವೂ ಸಹ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.

ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 58 ಪೈಸೆ ಏರಿಕೆಯಾಗಿದೆ. ಈ ಬಗ್ಗೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರದಲ್ಲಿ 33 ಪೈಸೆ ಹೆಚ್ಚಳವಾಗಿ 79.56ರೂಗೆ ಏರಿಕೆಯಾಗಿದೆ. ಅಂತೆಯೇ ಡೀಸೆಲ್‌ ದರ ಕೂಡ 58 ಪೈಸೆ ಏರಿಕೆಯಾಗೆ ರೂ78.85 ಆಗಿದೆ. 

ಇನ್ನು ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ 34 ಪೈಸೆ ಹೆಚ್ಚಳವಾಗಿ ರೂ82.15ಗೆ ಏರಿಕೆಯಾಗಿದ್ದು, ಡೀಸೆಲ್‌ ದರದಲ್ಲಿ 55 ಪೈಸೆ ಹೆಚ್ಚಳವಾಗಿ 74.98ರೂಗೆ ಏರಿಕೆಯಾಗಿದೆ. 

ಕೇಂದ್ರ ಸರ್ಕಾರ ಮಾರ್ಚ್‌ 14ರಂದು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‌ಗೆ ರೂ 3 ಹೆಚ್ಚಿಸಿತು. ಮತ್ತೆ ಮೇ 5ರಂದು ಪ್ರತಿ ಲೀಟರ್‌ ಪೆಟ್ರೋಲ್‌ ಮೇಲಿನ ತೆರಿಗೆ ರೂ10 ಹಾಗೂ ಡೀಸೆಲ್‌ಗೆ ರೂ13 ಹೆಚ್ಚಳ ಮಾಡಿತ್ತು. ಇದರಿಂದಾಗಿ ಸರ್ಕಾರಕ್ಕೆ ರೂ2 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ವರಮಾನ ಸಂಗ್ರಹವಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.