ವಾಣಿಜ್ಯ

ಸರ್ಕಾರಿ ಸ್ವಾಮ್ಯದ 10 ಬ್ಯಾಂಕುಗಳನ್ನು 4 ಬ್ಯಾಂಕ್​ಗಳಾಗಿ ವಿಲೀನ, ಏ. 1 ರಿಂದ ಜಾರಿ: ನಿರ್ಮಲಾ ಸೀತಾರಾಮನ್

ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್ ಗಳನ್ನು ನಾಲ್ಕು ಬ್ಯಾಂಕ್ ಗಳಾಗಿ ವಿಲೀನ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದ್ದು, ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

ಸರ್ಕಾರಿ ಸ್ವಾಮ್ಯದ 10 ಬ್ಯಾಂಕುಗಳನ್ನು 4 ಬ್ಯಾಂಕ್​ಗಳಾಗಿ ವಿಲೀನ, ಏ. 1 ರಿಂದ ಜಾರಿ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Published On :

ನವದೆಹಲಿ: ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್ ಗಳನ್ನು ನಾಲ್ಕು ಬ್ಯಾಂಕ್ ಗಳಾಗಿ ವಿಲೀನ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದ್ದು, ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಅಲಹಬಾದ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಬ್ಯಾಂಕ್ ಸೇರಿದಂತೆ 10 ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ನಾಲ್ಕು ಪ್ರಮುಖ ಬ್ಯಾಂಕ್‌ಗಳಾಗಿ ಪರಿವರ್ತನೆಗೊಳ್ಳುತ್ತಿದ್ದು, ಏಪ್ರಿಲ್ 1ರಿಂದ ಕಾರ್ಯಾಚರಿಸಲಿವೆ ಎಂದು ತಿಳಿಸಿದರು.

ಈಗಾಗಲೇ ಪ್ರಕಟ ಮಾಡಲಾಗಿರುವ ವಿಲೀನ ಪ್ರಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ಸಿಕ್ಕಿದೆ. ಅದರಲ್ಲಿ ಯಾವುದೇ ಕಾನೂನಾತ್ಮಕ ತೊಡಕುಗಳಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬ್ಯಾಂಕುಗಳ ವಿಲೀನದ ಬಗ್ಗೆ ಈಗಾಗಲೇ ಆಯಾ ಬ್ಯಾಂಕುಗಳ ನಿರ್ದೇಶಕರು ನಿರ್ಧಾರವನ್ನು ತೆಗೆದುಕೊಂಡಾಗಿದೆ. ಜಾಗತಿಕ ಬ್ಯಾಂಕುಗಳನ್ನು ಮಾಡುವ ಉದ್ದೇಶದಿಂದ ಈ ವಿಲೀನ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.