ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 3 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ
ಕೋವಿಡ್ -19 ಮಹಾಮಾರಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುವ ನಡುವೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ.

ನವದೆಹಲಿ: ಕೋವಿಡ್ -19 ಮಹಾಮಾರಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುವ ನಡುವೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ.
ಪ್ರತಿ ಲೀಟರ್‌ಗೆ 3 ರೂ. ಅಬಕಾರಿ ಸುಂಕ ಹೆಚ್ಚಿಸಲಾಗಿದೆ ತಿಳಿಸಿದೆ. ಅದೇ ರೀತಿ ಪೆಟ್ರೋಲ್ ಮೇಲೆ ಪ್ರತ್ಯೇಕವಾಗಿ ಅಬಕಾರಿ ಸುಂಕ ವನ್ನು 2 ರೂ ನಿಂದ 8 ರೂ ಮತ್ತು ಡೀಸೆಲ್ ಮೇಲೆ 4 ರೂ.ಗೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಸ್ತೆ ಸೆಸ್ ಕೂಡ ಹೆಚ್ಚಿಸಲಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 1ರೂ ಹಾಗೂ ರೂ. 10 ಹೆಚ್ಚಿಸಲಾಗಿದೆ.
ಅಂತರರಾಷ್ಟ್ರೀಯ ತೈಲ ಬೆಲೆಗಳ ಇಳಿಮುಖ ಕಂಡ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ದೇಶದ ಆರ್ಥಿಕತೆ ಮಂದಗತಿಯಿಂದ ಹೆಣಗಾಡುತ್ತಿರುವ ನಡುವೆಯೇ ಕೊರೋನಾ ವೈರಸ್ ಪ್ರಭಾವದಿಂದ ಮತ್ತಷ್ಟು ಹದಗೆಡುವ ಸಾಧ್ಯತೆಯ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುವುದರೊಂದಿಗೆ, ಇಂಧನ ಬೆಲೆಗಳು ಸ್ವಲ್ಪಮಟ್ಟಿಗೆ ಏರಿಕೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 2000 ಕೋಟಿ ಹೆಚ್ಚುವರಿ ಆದಾಯ ಬರಬಹುದು ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


