ಯೆಸ್ ಬ್ಯಾಂಕ್ ಬಿಕ್ಕಟ್ಟು: ಅನಿಲ್ ಅಂಬಾನಿಗೆ ಇಡಿ ಸಮನ್ಸ್
ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬಿಕ್ಕಟ್ಟು ಎದುರಿಸುತ್ತಿರುವ ಬ್ಯಾಂಕಿನಿಂದ ಸಾಲ ಪಡೆದ ನಂತರಸಾಲ ಮರುಪಾವತಿಸದೆ ಹೋದ ದೊಡ್ಡ ಉದ್ಯಮ ಸಮೂಹಗಳಲ್ಲಿ ಅನಿಲ್ ಅಂಬಾನಿಯವರ ಸಂಥೆಗಳೂ ಸೇರಿರುವ ಕಾರಣ ಅಂಬಾನಿಯನ್ನು ಸೋಮವಾರ ಮುಂಬೈನ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಕೇಳಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಆದರೆ ಆರೋಗ್ಯ ಹದಗೆಟ್ಟಿರುವ ಕಾರಣ ಅಂಬಾನಿ ತನಿಖಾ ಏಜೆನ್ಸಿಯಿಂದ ವಿನಾಯಿತಿ ಕೋರಿದ್ದಾರೆ ಮತ್ತು ಅವರಿಗೆ ಹೊಸ ದಿನಾಂಕವನ್ನು ನೀಡಬಹುದು ಎಂದು ತಿಳಿದುಬಂದಿದೆ.
ಅಂಬಾನಿಯ ಸಮೂಹ ಕಂಪನಿಗಳು ಯೆಸ್ ಬ್ಯಾಂಕಿನಿಂದ ಸುಮಾರು 12,800 ಕೋಟಿ ರೂ.ಗಳ ಸಾಲವನ್ನು ತೆಗೆದುಕೊಂಡಿವೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


