ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಆರ್‌ಬಿಐ ಚಿಂತನೆ
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಕೊರೋನಾ ಭೀತಿಯಿಂದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ಹೀಗಾಗಿ ಸಾಮಾನ್ಯ ಜನ ಮತ್ತು ಉದ್ಯಮಗಳ ಹಿತರಕ್ಷಣೆಯ ದೃಷ್ಟಿಯಿಂದ ಬ್ಯಾಂಕ್ ಸಾಲಗಳ ಮೇಲಿನ ಮರುಪಾವತಿಯನ್ನು ಆರ್‌ಬಿಐ ಮತ್ತೆ ಮೂರು ತಿಂಗಳವರೆಗೆ ವಿಸ್ತರಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿದೆ ಎನ್ನಲಾಗಿದೆ.
ಈ ಹಿಂದೆ ಸಾಲಗಳ ಮರುಪಾವತಿಯ ಕಾಲವನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಭಾರತೀಯ ಬ್ಯಾಂಕುಗಳ ಸಂಘ ಸೇರಿದಂತೆ ವಿವಿಧ ಭಾಗಗಳಿಂದ ಸಲಹೆಗಳು ಬಂದಿದ್ದವು. ಅಲ್ಲದೆ ಲಾಕ್ ಡೌನ್ ಮುಂದುವರೆದಿರುವುದರಿಂದ ಅನೇಕ ಸಂಸ್ಥೆಗಳು ಮತ್ತು ವ್ಯಕ್ತಿಗಳು ತಮ್ಮ ಸಾಲವನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಪ್ರಸ್ತುತ ಕೇಂದ್ರ ಸರ್ಕಾರ ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆ ನೀಡಿದೆಯಾದರೂ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ ಪುನಾರಂಭಗೊಂಡಿಲ್ಲ. ಲಾಕ್ ಡೌನ್ ನಿಂದಾಗಿ ಹಲವು ಸಣ್ಣ ಕೈಗಾರಿಕೆಗಳು ನೆಲಕಚ್ಚಿದ್ದು, ಅವುಗಳ ಪುನಸ್ಛತೇನಕ್ಕೆ ಕ್ರಮ ಕೈಗೊಳ್ಳಬೇಕು. ಇದೇ ಕಾರಣಕ್ಕೆ ಇದೀಗ ಆರ್ ಬಿಐ ಕೂಡ ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡುವ ಕುರಿತು ಚಿಂತನೆ ನಡೆಸಿದೆ ಎನ್ನಲಾಗಿದೆ.
ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳಿಗೆ ಕೆಲವು ಸಡಿಲಿಕೆಗಳೊಂದಿಗೆ ಕೇಂದ್ರ ಸರ್ಕಾರವು ಮೇ 17 ರವರೆಗೆ ಲಾಕ್‌ಡೌನ್ ಅವಧಿಯನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


