ವಾಣಿಜ್ಯ

ಜಿಎಸ್ ಟಿ ಸಲ್ಲಿಕೆ ದಿನಾಂಕ ವಿಸ್ತರಣೆ: ತಡವಾದ ಪಾವತಿಗೆ ಶುಲ್ಕ, ದಂಡ ವಿನಾಯ್ತಿ

ಕೋವಿಡ್ 19 ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ 2018-19ನೇ ಆರ್ಥಿಕ ಸಾಲಿನ ವಾರ್ಷಿಕ ಜಿಎಸ್ ಟಿ ಸಲ್ಲಿಕೆ ದಿನಾಂಕವನ್ನು ಕೇಂದ್ರ ಸರ್ಕಾರ ಸೆಪ್ಟೆಂಬರ್ 30ಕ್ಕೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಜಿಎಸ್ ಟಿ ಸಲ್ಲಿಕೆಗೆ ಜೂನ್ 30 ಕಡೆಯ ದಿನವಾಗಿತ್ತು.

ಜಿಎಸ್ ಟಿ ಸಲ್ಲಿಕೆ ದಿನಾಂಕ ವಿಸ್ತರಣೆ: ತಡವಾದ ಪಾವತಿಗೆ ಶುಲ್ಕ, ದಂಡ ವಿನಾಯ್ತಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೋವಿಡ್ 19 ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ 2018-19ನೇ ಆರ್ಥಿಕ ಸಾಲಿನ ವಾರ್ಷಿಕ ಜಿಎಸ್ ಟಿ ಸಲ್ಲಿಕೆ ದಿನಾಂಕವನ್ನು ಕೇಂದ್ರ ಸರ್ಕಾರ ಸೆಪ್ಟೆಂಬರ್ 30ಕ್ಕೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಜಿಎಸ್ ಟಿ ಸಲ್ಲಿಕೆಗೆ ಜೂನ್ 30 ಕಡೆಯ ದಿನವಾಗಿತ್ತು.

ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 5 ಕೋಟಿಗಿಂತ ಕಡಿಮೆ ವಹಿವಾಟು ನಡೆಸಿದ ಕಂಪೆನಿಗಳು ಬಡ್ಡಿ ಅಥವಾ ದಂಡ ಕಟ್ಟಬೇಕಾಗಿಲ್ಲ. ದೊಡ್ಡ ಕಂಪೆನಿಗಳಿಗೆ ಸಹ ತಡವಾಗಿ ಶುಲ್ಕ ಪಾವತಿಸಿದ್ದಕ್ಕೆ ದಂಡ ಅನ್ವಯವಾಗುವುದಿಲ್ಲ. ಕೇವಲ ಶೇಕಡಾ 9ರ ಬಡ್ಡಿ ಪಾವತಿಸಬೇಕಾಗುತ್ತದೆ. ಇದು ಕೇವಲ ದೊಡ್ಡ ಕಂಪೆನಿಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದರು.

ಇದೇ ರೀತಿ ನೋಟಿಸ್, ಅಧಿಸೂಚನೆ, ಅನುಮೋದನೆ ಆದೇಶ, ಮಂಜೂರಾತಿ ಆದೇಶ, ಮೇಲ್ಮನವಿ ಸಲ್ಲಿಸುವುದು, ರಿಟರ್ನ್ ಸಲ್ಲಿಸುವುದು, ಹೇಳಿಕೆಗಳು, ಅರ್ಜಿಗಳು, ವರದಿಗಳು, ಇನ್ನಾವುದೇ ದಾಖಲೆಗಳು, ಜಿಎಸ್ಟಿ ಕಾನೂನಿನಡಿಯಲ್ಲಿ ಯಾವುದೇ ಅನುಸರಣೆಗೆ ಕಾಲಮಿತಿಯನ್ನು ಜೂನ್ 30 ಕ್ಕೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.