ವಾಣಿಜ್ಯ

ಸಣ್ಣ ಮತ್ತು ಮದ್ಯಮ ಉದ್ಯಮ ವಲಯಕ್ಕೆ 5.91 ಲಕ್ಷ ಕೋಟಿ ರೂ ಸಾಲ: ನಿರ್ಮಲಾ ಸೀತಾರಾಮನ್

ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮದ್ಯಮ ಉದ್ಯಮಗಳಿಗೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು 5.95 ಲಕ್ಷ ಕೋಟಿ ರೂ ಸಾಲ ಮಂಜೂರು ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಣ್ಣ ಮತ್ತು ಮದ್ಯಮ ಉದ್ಯಮ ವಲಯಕ್ಕೆ 5.91 ಲಕ್ಷ ಕೋಟಿ ರೂ ಸಾಲ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Published On :

ನವದೆಹಲಿ: ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮದ್ಯಮ ಉದ್ಯಮಗಳಿಗೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು 5.95 ಲಕ್ಷ ಕೋಟಿ ರೂ ಸಾಲ ಮಂಜೂರು ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮಾರ್ಚ್ 1 ರಿಂದ ಮೇ 8 ರ ವರೆಗೆ ಕಂಪೆನಿ ಕಾಯ್ದೆಯಡಿ ನೋಂದಣಿಯಾಗಿರುವ ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳು ಸಹ 1.18 ಲಕ್ಷ ಕೋಟಿ ರೂಪಾಯಿ ಸಾಲ ಒದಗಿಸಿವೆ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಿರ್ಮಲಾ ಸೀತಾರಾಮನ್, ಶೇ 97 ರಷ್ಟು ಅರ್ಹ ಸಾಲಗಾರರಿಗೆ 65 ಸಾವಿರದ 879 ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಮತ್ತು ದುಡಿಯುವ ಬಂಡವಾಳ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಕೇಂದ್ರ ಹಣಕಾಸು ಸಚಿವಾಲಯ 14 ರಾಜ್ಯಗಳಿಗೆ 15ನೇ ಹಣಕಾಸು ಆಯೋಗದಡಿ 6 ಸಾವಿರದ 195 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.