ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ಇಂದು ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು ಈ ನಿಟ್ಟಿನಲ್ಲಿ ಸಮಾಜದ ವಿವಿಧ ವರ್ಗಗಳಿಗೆ ನಿನ್ನೆ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಅದರ ವಿವರಗಳನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೊಡಲಿದ್ದಾರೆ ಎಂದು ಹೇಳಿದ್ದರು.
ನಿನ್ನೆ ಪ್ರಧಾನಿ ಮೋದಿಯವರು ಪ್ರಕಟಿಸಿದ್ದ ಮೊತ್ತ 265 ಬಿಲಿಯನ್ ಡಾಲರ್ ಆಗಿದ್ದು ಇಡೀ ಏಷ್ಯಾ ಖಂಡದಲ್ಲಿ ಜಪಾನ್ ನಂತರ ಇಷ್ಟೊಂದು ಪರಿಹಾರ ಮೊತ್ತವನ್ನು ಪ್ರಕಟಿಸಿದ ದೇಶ ಭಾರತವಾಗಿದೆ.
ಈ ನಿಟ್ಟಿನಲ್ಲಿ ಇಂದು ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ಕರೆದಿದ್ದು ಅದರಲ್ಲಿ ಆರ್ಥಿಕ ಪ್ಯಾಕೇಜ್, ಆತ್ಮನಿರ್ಭಾರ್ ಭಾರತ್ ಅಭಿಯಾನ ಬಗ್ಗೆ ವಿವರ ನೀಡಲಿದ್ದಾರೆ.
Finance Minister Smt. @nsitharaman will address a Press Conference today, 13th May 2020, at 4 PM in New Delhi.#EconomicPackage#AatmanirbharBharat #AatmaNirbharBharatAbhiyan #IndiaFightsCorona pic.twitter.com/FmKcItA23C
— Ministry of Finance
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


