ಕೇಂದ್ರ ಸರ್ಕಾರಕ್ಕೆ ಮಹತ್ವದ ಜಯ! ಭಾರತಕ್ಕೆ ಮಲ್ಯ ಹಸ್ತಾಂತರ ತಡೆಗಾಗಿನ ಮನವಿ ಆಲಿಸಲು ಯುಕೆ ಕೋರ್ಟ್ ನಕಾರ
ಮದ್ಯದ ದೊರೆ ವಿಜಯ್ ಮಲ್ಯಗೆ ಲಂಡನ್ ನ್ಯಾಯಾಲಯದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅಲ್ಲಿನ ಹೈಕೋರ್ಟ್ ಅವಕಾಶ ನೀಡಿಲ್ಲ. ಕಳೆದ ತಿಂಗಳು ಭಾರತಕ್ಕೆ ಹಸ್ತಾಂತರದ ಆದೇಶದ ವಿರುದ್ಧದ ಮಲ್ಯ ಅರ್ಜಿಯನ್ನು ಅಲ್ಲಿನ ಹೈಕೋರ್ಟ್ ವಜಾ ಮಾಡಿತ್ತು. ಇದೀಗ ಮತ್ತೆ ಆ ವಿಚಾರವಾಗಿ

ಲಂಡನ್: ಮದ್ಯದ ದೊರೆ ವಿಜಯ್ ಮಲ್ಯಗೆ ಲಂಡನ್ ನ್ಯಾಯಾಲಯದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅಲ್ಲಿನ ಹೈಕೋರ್ಟ್ ಅವಕಾಶ ನೀಡಿಲ್ಲ. ಕಳೆದ ತಿಂಗಳು ಭಾರತಕ್ಕೆ ಹಸ್ತಾಂತರದ ಆದೇಶದ ವಿರುದ್ಧದ ಮಲ್ಯ ಅರ್ಜಿಯನ್ನು ಅಲ್ಲಿನ ಹೈಕೋರ್ಟ್ ವಜಾ ಮಾಡಿತ್ತು. ಇದೀಗ ಮತ್ತೆ ಆ ವಿಚಾರವಾಗಿ ಯುಕೆ ಸುಪ್ರೀಂ ಕೋರ್ಟ್‌ಮೆಟ್ಟಿಲೇರುವ ಕನಸಿನಲ್ಲಿದ್ದ ವಿಜಯ್ ಮಲ್ಯ ಅವರಿಗೆ ನಿರಾಶೆಯಾಗಿದ್ದು ಇನ್ನು ಕೆಲವು ದಿನಗಳಲ್ಲಿ ಅವರು ಭಾರತಕ್ಕೆ ಆಗಮಿಸುವುದು ಖಚಿತ ಆದಂತಾಗಿದೆ.
ಈಗ ಕಾರ್ಯನಿರ್ವಹಿಸದ ಕಿಂಗ್‌ಫಿಶರ್ ಏರ್‌ಲೈನ್ಸ್‌ಗೆ.ಸಂಬಂಧಿಸಿದಂತೆ ವಂಚನೆ ಮತ್ತು ಬಹಿರಂಗಪಡಿಸದ ಸಾಲಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಕಳೆದ ಏಪ್ರಿಲ್ 20ರ ಹೈಕೋರ್ಟ್ ತೀರ್ಪಿನ ಮೇಲೆ ಉನ್ನತ ನ್ಯಾಯಾಲಯವನ್ನು ಸಂಪರ್ಕಿಸಲು ಅನುಮತಿಗಾಗಿ ಈ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಯುಕೆ ಗೃಹ ಕಾರ್ಯದರ್ಶಿ ಪ್ರಮಾಣೀಕರಿಸಿದ ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಸ್ತಾಂತರ ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಕೋರ್ಟ್ ವಜಾ ಮಾಡಿದೆ. ಇತ್ತೀಚಿನ ತೀರ್ಪು ಈಗ ಮರು ಪ್ರಮಾಣೀಕರಣಗೊಂಡಿದ್ದು 28 ದಿನಗಳಲ್ಲಿ ಮಲ್ಯ ಭಾರತಕ್ಕೆ ಶಸ್ತಾಂತರವಾಗುವ ಪ್ರಕ್ರಿಯೆ ನಡೆಯಬೇಕಿದೆ.
ಮೌಖಿಕ ಹೇಳಿಕೆಯನ್ನು ಆಲಿಸುವುದು, ಕರಡು ಶ್ನೆಗಳ ಬಗ್ಗೆ ಪ್ರಮಾಣಪತ್ರವನ್ನು ನೀಡುವುದು ಮತ್ತು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವುದು ಮುಂತಾದ ಮೂರು ಅಂಶಗಳಲ್ಲೂ ಮಲ್ಯ ಅವರ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಯುಕೆ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ (ಸಿಪಿಎಸ್) ಹೇಳಿದೆ.
’ಇನ್ನು ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿ ಇದೇ ವಾರದ ಮೊದಲಲ್ಲಿ ಭಾರತ ಸರ್ಕಾರ ತನ್ನ ಪ್ರತಿಕ್ರಿಯೆ ನೀಡಿತ್ತು.ಇದೀಗ ಮಲ್ಯ ವರಿಗಿದ್ದ ಕಡೇ ಅವಕಾಶವೂ ತಪ್ಪಿದ್ದು ಭಾರತವು ಮಲ್ಯ ಅವರ ಭಾರತ ಹಸ್ತಾಂತರಕ್ಕೆ ಸಂಬಂಧಿಸಿದ ವಿನಂತಿಯ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ನಡೆಸಲಿದೆ ಎನ್ನಲಾಗಿದೆ.
Related Article
ಬೇಷರತ್ತಾಗಿ ನನ್ನ ಹಣ ತೆಗೆದುಕೊಂಡು ಪ್ರಕರಣವನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ವಿಜಯ್ ಮಲ್ಯ ಮನವಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


