ಚಿನ್ನ ಕೊಳ್ಳುವವರಿಗೆ ಸುವರ್ಣಾವಕಾಶ: ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ!
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಹಿಂದೆದೂ ಆಗದಷ್ಟು ಭಾರೀ ಕುಸಿತ ಕಂಡಿದೆ.

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಹಿಂದೆದೂ ಆಗದಷ್ಟು ಭಾರೀ ಕುಸಿತ ಕಂಡಿದೆ.
ಬೆಂಗಳೂರು ಸೇರಿದಂತೆ ಹೈದರಾಬಾದ್, ಕೇರಳ ಮತ್ತು ವೈಜಾಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಕುಸಿತ ಕಂಡಿದೆ.
22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 900 ರುಪಾಯಿಯಷ್ಟು ಕಡಿಮೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ ಇದೀಗ 43,400 ರುಪಾಯಿ ಆಗಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 890 ರುಪಾಯಿ ಕಡಿಮೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ ಇದೀಗ 47,430 ರುಪಾಯಿಗೆ ಕುಸಿದಿದೆ.
ಬೆಳ್ಳಿ ಒಂದು ಕೆಜಿಗೆ ಬರೋಬ್ಬರಿ 800 ರುಪಾಯಿಗಳಷ್ಟು ಕಡಿಮೆಯಾಗಿದ್ದು 48,700 ರುಪಾಯಿ ಇದ್ದ ಬೆಳ್ಳಿ ಇದೀಗ 47,900 ರುಪಾಯಿಗೆ ಇಳಿಕೆಯಾಗಿದೆ.
ನಗರ 22 ಕ್ಯಾರೆಟ್ ಚಿನ್ನ(10 ಗ್ರಾಂ) 24 ಕ್ಯಾರೆಟ್ ಚಿನ್ನ(10 ಗ್ರಾಂ) ಬೆಳ್ಳಿ (1 ಕೆಜಿ)
*ಬೆಂಗಳೂರು 43,400 47,430 47,900
*ಹೈದರಾಬಾದ್ 44,310 48,090 47,900
* ಕೇರಳ 42,750 46,750 47,900
* ವೈಜಾಗ್ 43,400 48,090 47,900
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


